ಮುಂಬೈ : ಖ್ಯಾತ ಬಾಲಿವುಡ್ ನಟ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ ಕಳ್ಳನೊಬ್ಬ ಚಾಕು ಹಾಕಿದ್ದಾನೆ ಎಂದು ವರದಿಯಾಗಿದೆ,
ಮನೆಯೊಳಗೆ ನುಗ್ಗಿದ ಕಳ್ಳನನ್ನು ತಡೆಯುವ ವೇಳೆ ಕಳ್ಳ ಅವರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿ ತಿಳಿಸಿದೆ.
ಘಟನೆಯಲ್ಲಿ ನಟ ಸೈಫ್ ಅಲಿ ಖಾನ್‌ಗೆ ಅನೇಕ ಇರಿತದ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಗಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಯೊಬ್ಬ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನ ಪಶ್ಚಿಮ ಬಾಂದ್ರಾದಲ್ಲಿರುವ ಅವರ ನಿವಾಸದಲ್ಲಿ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೈಫ್ ಅಲಿ ಖಾನ್ ಅವರನ್ನು ಮುಂಜಾನೆ 3:30ಕ್ಕೆ ಆಸ್ಪತ್ರೆಗೆ ಕರೆತರಲಾಯಿತು. ಸೈಫ್ ಅವರಿಗೆ 2 ಕಡೆ ಚಾಕುವಿನಿಂದ ಆಳವಾಗಿ ಇರಿಯಲಾಗಿದೆ. ಬೆನ್ನುಮೂಳೆ ಸೇರಿದಂತೆ ಆರು ಭಾಗಗಳಲ್ಲಿ ಗಾಯಗಳಾಗಿವೆ. ಸದ್ಯ ತಜ್ಞ ವೈದ್ಯರು ಶಸ್ತ್ರಚಿಕಿತ್ಸೆ ನಡೆಸುತ್ತಿದ್ದಾರೆ’ಎಂದು ಲೀಲಾವತಿ ಆಸ್ಪತ್ರೆಯ ಸಿಒಒ ಡಾ.ನೀರಜ್ ಉತ್ತಮನಿ ಹೇಳಿದ್ದಾರೆ.
ಮನೆಯಲ್ಲಿದ್ದವರು ಎಚ್ಚರಗೊಂಡ ನಂತರ ದರೋಡೆಕೋರ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸದ್ಯ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಈ ಸಮಯದಲ್ಲಿ, ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ತಂಡವು ಸೈಫ್ ಅಲಿ ಖಾನ್ ಅವರ ನಿವಾಸದಲ್ಲಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು ಹುಡುಕಾಟ ನಡೆಸುತ್ತಿದೆ.
ಸೈಫ್ ಕೆಲಸಗಾರ ಕಳ್ಳನನ್ನು ಹಿಡಿಯಲು ಪ್ರಯತ್ನಿಸಿದ್ದಾನೆ, ಈ ವೇಳೆ ನಡೆದ ಗದ್ದಲದಲ್ಲಿ ಸೈಫ್ ಎಚ್ಚರಗೊಂಡಿದ್ದು, ಆಗ ಅವರು ಕಳ್ಳರನ್ನು ತಡೆಯಲು ಹೋಗಿದ್ದು, ಈ ವೇಳೆ ಕಳ್ಳರು ಹಲ್ಲೆ ಮಾಡಿದ್ದಾರೆ. ತಕ್ಷಣ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸದ್ಯ ಕಳ್ಳರನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ.
ಸೈಫ್ ಅಲಿ ಖಾನ್ ತಂಡವು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಸೈಫ್ ಅಲಿ ಖಾನ್ ಅವರ ನಿವಾಸದಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ. ಅವರು ಪ್ರಸ್ತುತ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಾಧ್ಯಮಗಳು ಮತ್ತು ಅಭಿಮಾನಿಗಳು ತಾಳ್ಮೆಯಿಂದಿರಲು ನಾವು ವಿನಂತಿಸುತ್ತೇವೆ. ಇದು ಪೊಲೀಸ್ ವಿಷಯವಾಗಿದೆ. ನಾವು ಪರಿಸ್ಥಿತಿಯ ಬಗ್ಗೆ ನಿಮಗೆ ತಿಳಿಸುತ್ತೇವೆ ಎಂದು ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ