ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನ (Budget Session)ದ ಮೊದಲ ಭಾಗವು ಜನವರಿ 31ರಿಂದ ಫೆ. 13ರವರೆಗೆ ನಡೆಯಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ. 1ರಂದು ತಮ್ಮ 8ನೇ ಬಜೆಟ್ ಮಂಡಿಸಲಿದ್ದಾರೆ.
ಜ. 31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರನ್ನು ಉದ್ದೇಶಿಸಿ ಮಾತನಾಡುವ ಮೂಲಕ ಅಧಿವೇಶನ ಆರಂಭವಾಗಲಿದೆ. ಫೆ. 1ರ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಆಗಲಿದೆ. ಇದು ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ 8ನೇ ಬಜೆಟ್ ಇದಾಗಲಿದ್ದು, ಇದರಲ್ಲಿ 6 ಪೂರ್ಣ ಮತ್ತು 2 ಮಧ್ಯಂತರ ಬಜೆಟ್ಗಳು ಸೇರಿವೆ. ಅಧಿವೇಶನದ ಮೊದಲ ಭಾಗ ಉಭಯ ಸದನಗಳಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ಮತ್ತು ಸಂಸತ್ತಿನ ಎರಡು ಸದನಗಳಲ್ಲಿ ಪ್ರಧಾನಿಯವರ ಉತ್ತರದೊಂದಿಗೆ ಕೊನೆಗೊಳ್ಳುತ್ತದೆ. ಬಜೆಟ್ ಅಧಿವೇಶನದ 2ನೇ ಭಾಗ ಮಾರ್ಚ್ 10ರಿಂದ ಏಪ್ರಿಲ್ 4ರಂದು ನಡೆಯಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ