ಯಕ್ಷಗಾನ ಕಲಾವಿದ ಅರುಣಕುಮಾರ ಜಾರ್ಕಳಗೆ ಕುಂದೇಶ್ವರ ಸಮ್ಮಾನ

ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಅರುಣಕುಮಾರ ಜಾರ್ಕಳ ಅವರು ಆಯ್ಕೆಯಾಗಿದ್ದಾರೆ. ಜನವರಿ 23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಹಾಸ್ಯ ಚಕ್ರವರ್ತಿ: ಅರುಣಕುಮಾರ ಜಾರ್ಕಳ‌ ಮಾತೃಭಾಷೆ ತೆಲುಗು. ದೊರೆಸ್ವಾಮಿ ಹಾಗೂ ಲೀಲಾವತಿ ದಂಪತಿ ಪುತ್ರ ಉದ್ಯೋಗ ನಿಮಿತ್ತವಾಗಿ ಜಾರ್ಕಳ ದಲ್ಲಿ ನೆಲೆಸಿದ್ದರು. ಈಗ ಪೆರ್ಣಂಕಿಲ ಎಂಬಲ್ಲಿ ವಾಸವಿದ್ದಾರೆ.
ಧರ್ಮಸ್ಥಳ ತರಬೇತಿ ಶಿಬಿರದಲ್ಲಿ ಯಕ್ಷಗಾನದ ಅಭ್ಯಾಸ ಮಾಡಿದ ಅವರು ನಂತರ ಕಟೀಲು ಮೇಳಕ್ಕೆ ಸೇರಿಕೊಂಡರು. ಈಗ ತೆಂಕು ಮತ್ತು ಬಡಗುತಿಟ್ಟಿನಲ್ಲಿ ಬಹು ಬೇಡಿಕೆ ಯಕ್ಷಗಾನ ಕಲಾವಿದರು. ಸಾಲಿಗ್ರಾಮ ಮೇಳ ದಲ್ಲಿ ಪ್ರವರ್ಧಮಾನಕ್ಕೆ ಬಂದ ಅವರು ಪ್ರಸ್ತುತ ಬೆಂಕಿನಾಥೇಶ್ವರ ಮೇಳದಲ್ಲಿ ಪ್ರಧಾನ ಹಾಸ್ಯ ಕಲಾವಿದರಾಗಿದ್ದಾರೆ. ವಿಶಿಷ್ಟ ಶೈಲಿಯ ಆಂಗಿಕ ಅಭಿನಯದಿಂದ ಜನರನ್ನು ನಗೆಗಡಲಲ್ಲಿ ತೇಲಿಸಬಲ್ಲ ಸಮರ್ಥ ಹಾಸ್ಯಗಾರರೆಂದು ಖ್ಯಾತಿ ಪಡೆದಿರುವ ಇವರು ಶ್ವೇತ ಕುಮಾರ ಚರಿತ್ರೆಯ ಪ್ರೇತದ ಪಾತ್ರ ಬಹಳ ಜನಪ್ರಿಯತೆ ಪಡೆದಿದೆ.. ಅಮೆರಿಕ ಹಾಗೂ ಬ್ರಿಟನ್‌ನಲ್ಲೂ ಯಕ್ಷಗಾನ ಪ್ರದರ್ಶಿಸಿದ್ದಾರೆ.
ಜ. 23ರಂದು ರಾತ್ರಿ 7.30 ಗಂಟೆಗೆ ಬೆಂಕಿನಾಥೇಶ್ವರ ಮೇಳದವರಿಂದ ಶ್ರೀದೇವಿ ಅಗ್ನಿ ಕಲ್ಲುರ್ಟಿ ತುಳು ಬಯಲಾಟ ನಡೆಯಲಿದೆ.
ಈ ಸಂದರ್ಭ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಸಕ ವಿ. ಸುನಿಲಕುಮಾರ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು, ಎಸ್ ಕೆ ಎಸ್ ಕಾರ್ಕಳ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸುಜಯಕುಮಾರ ಶೆಟ್ಟಿ, ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನಕುಮಾರ ನಾಯಕ, ಕಾರ್ಕಳ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಜಿತ ಹೆಗಡೆ ಮಾಳ ಪಾಲ್ಗೊಳ್ಳಲಿದ್ದಾರೆ. ಯಕ್ಷಗಾನ ಕಲಾವಿದ, ನ್ಯಾಯವಾದಿ ರಮಣಾಚಾರ್ ಅಭಿನಂದನಾ ಭಾಷಣ ಮಾಡಲಿದ್ದಾರೆ.
ಜಾತ್ರೆ ನಿಮಿತ್ತ ಜ.21ರಂದು ತೋರಣ ಮುಹೂರ್ತ ಧಾರ್ಮಿಕ ಕಾರ್ಯಕ್ರಮಗಳು, ಜ.22ರಂದು ವರ್ಷಾವಧಿ ಮಹೋತ್ಸವ, ಅನ್ನಸಂತರ್ಪಣೆ, ನೇಮೋತ್ಸವ ನಡೆಯಲಿದೆ ಎಂದು ಧರ್ಮದರ್ಶಿ ಕೃಷ್ಣರಾಜೇಂದ್ರ ಭಟ್‌ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಭಾರತ ಸರ್ಕಾರ ವಿರುದ್ಧ ಹೈಕೋರ್ಟ್​​ನಲ್ಲಿ ಮೊಕದ್ದಮೆ ಹೂಡಿದ ಇಲಾನ್ ಮಸ್ಕ್ ಒಡೆತನದ ಎಕ್ಸ್‌

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement