ಮುಡಾ ಹಗರಣ: 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇ.ಡಿ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.
ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಈ ಕ್ರಮ ಕೈಕೊಳ್ಳಲಾಗಿದೆ ಎಂದು ಇ.ಡಿ. (ED) ಟ್ವೀಟ್ ಮೂಲಕ ತಿಳಿಸಿದೆ. ಇ.ಡಿ. ಮಾಹಿತಿಯ ಪ್ರಕಾರ, ತನಿಖಾ ಸಂಸ್ಥೆ ವಶಕ್ಕೆ ಪಡೆದಿರುವ 142 ಸ್ಥಿರಾಸ್ತಿಯ ಒಟ್ಟು ಮೌಲ್ಯ 300 ಕೋಟಿ ರೂಪಾಯಿಗಳಾಗಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ನಿವೇಶನ ಹಂಚಿಕೆ ಹಗರಣವನ್ನು ಇ.ಡಿ.ತನಿಖೆ ನಡೆಸುತ್ತಿದೆ. ಸ್ನೇಹಮಯಿ ಕೃಷ್ಣ ದೂರಿನನ್ವಯ ಇ.ಡಿ. (ED) ತನಿಖೆ ನಡೆಸುತ್ತಿದೆ.

ಜಾರಿ ನಿರ್ದೇಶನಾಲಯ 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ಸುಮಾರು 300 ಕೋಟಿ ರೂ.ಗಳಷ್ಟು ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಇ.ಡಿ. ಹೇಳಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಇದೇ ವೇಳೆ ಇ.ಡಿ. ಸಹ ತನಿಖೆ ಆರಂಭಿಸಿದೆ. ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಿಗೆ ತಮ್ಮ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ 14 ನಿವೇಶನಗಳ ಪರಿಹಾರವನ್ನು ಪಡೆಯಲು ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವ ಬಳಸಿದ್ದಾರೆ ಎನ್ನುವ ಆರೋಪ ಇದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 6

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement