ಬೆಳಗಾವಿ : ದಕ್ಷಿಣ ಕಾಶಿ ಎನಿಸಿರುವ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಭಾನುವಾರ ಪೂಜೆ ಸಲ್ಲಿಸಿದರು. ಕ್ಷೀರಾಭಿಷೇಕಕ್ಕೆ 111 ಲೀಟರ್ ಹಾಲು ಸಮರ್ಪಿಸಿದರು. ಸಚಿವ ಡಾ. ಎಂ.ಸಿ.ಸುಧಾಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಇದ್ದರು.
ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು, ನಾನೊಬ್ಬ ದೈವಭಕ್ತ. ಪೂಜೆ ಮಾಡಿ ದೈವಶಕ್ತಿ ನೆನಪಿಸಿಕೊಂಡು ಮನೆಯಿಂದ ಹೊರ ಬರುತ್ತೇನೆ. ಆದ್ದರಿಂದ ದೇವಸ್ಥಾನಕ್ಕೆ ಬಂದಿದ್ದೇನೆ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ