ಪ್ರಯಾಗರಾಜ್ : ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿರುವ ಮಹಾಕುಂಭ ಸ್ಥಳದಲ್ಲಿ ಟೆಂಟ್‌ನಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. 100ಕ್ಕೂ ಹೆಚ್ಚು ಡೇರೆಗಳಿಗೆ ಬೆಂಕಿ ವ್ಯಾಪಿಸಿ ಸುಟ್ಟು ಕರಕಲಾಗಿದೆ ಎಂದು ವರದಿ ತಿಳಿಸಿದೆ.
ಅದೃಷ್ವಶಾತ್ ಯಾರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬೃಹತ್ ಮಹಾಕುಂಭದಲ್ಲಿ ಸುರಕ್ಷತಾ ವ್ಯವಸ್ಥೆಯ ಭಾಗವಾಗಿನಿಯೋಜಿಸಲಾಗಿದ್ದ ಅಗ್ನಿಶಾಮಕ ವಾಹನಗಳು ಪ್ರದೇಶಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುತ್ತಮುತ್ತಲಿನ ಟೆಂಟ್‌ಗಳಲ್ಲಿ ವಾಸಿಸುತ್ತಿದ್ದ ಜನರನ್ನು ಸುರಕ್ಷತೆಗಾಗಿ ಸ್ಥಳಾಂತರಿಸಲಾಗಿದೆ.
ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಗಳು ಹಿರಿಯ ಅಧಿಕಾರಿಗಳನ್ನು ಬೆಂಕಿ ಅನಾಹುತ ಸಂಭವಿಸಿದ ಸ್ಥಳಕ್ಕೆ ಕಳುಹಿಸಿದ್ದಾರೆ.
ಮಹಾ ಕುಂಭಮೇಳದ ಸೆಕ್ಟರ್ 19 ರಲ್ಲಿ ಎರಡು ಸಿಲಿಂಡರ್‌ಗಳು ಸ್ಫೋಟಗೊಂಡವು, ನಂತರ ಶಿಬಿರಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು ಎಂದು ಹೇಳಲಾಗಿದೆ.
ಮಹಾ ಕುಂಭದ ಅಧಿಕೃತ ಎಕ್ಸ್ ಹ್ಯಾಂಡಲ್ ಪೋಸ್ಟ್ ಮಾಡಿದ್ದು, ಮಹಾ ಕುಂಭದಲ್ಲಿ ಸಂಭವಿಸಿದ ಬೆಂಕಿ ಅನಾಹುತದ ಘಟನೆಯು ಎಲ್ಲರನ್ನು ಬೆಚ್ಚಿಬೀಳಿಸಿದೆ. ಆಡಳಿತವು ತಕ್ಷಣದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಖಾತ್ರಿಪಡಿಸಿದೆ. ಪ್ರತಿಯೊಬ್ಬರ ಸುರಕ್ಷತೆಗಾಗಿ ನಾವು ಮಾ ಗಂಗೆಯನ್ನು ಪ್ರಾರ್ಥಿಸುತ್ತೇವೆ ಎಂದು ಹೇಳಿದೆ.
45 ದಿನಗಳ ಮಹಾಕುಂಭವು ಜನವರಿ 13 ರಂದು ಪ್ರಾರಂಭವಾಯಿತು. ಶನಿವಾರದವರೆಗೆ ಲಭ್ಯವಿರುವ ಅಧಿಕೃತ ಅಂಕಿಅಂಶಗಳ ಪ್ರಕಾರ 7.72 ಕೋಟಿಗೂ ಹೆಚ್ಚು ಜನರು ಪವಿತ್ರ ಸ್ನಾನ ಮಾಡಿದ್ದಾರೆ. ಭಾನುವಾರ 46.95 ಲಕ್ಷಕ್ಕೂ ಹೆಚ್ಚು ಭಕ್ತರು ಸ್ನಾನ (ಪವಿತ್ರ ಸ್ನಾನ) ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ