ಮಂಗಳೂರು | ಕೋಟೆಕಾರು ಬ್ಯಾಂಕ್‌ ದರೋಡೆ : ಮೂವರು ಆರೋಪಿಗಳ ಬಂಧನ

ಮಂಗಳೂರು : ಮಂಗಳೂರು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಎರಡು ದಿನಗಳ ಹಿಂದೆ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.
ಮುಂಬೈ ಮೂಲದ ಗ್ಯಾಂಗ್ ನಿಂದ ದರೋಡೆಯಾಗಿದ್ದು, ತಮಿಳುನಾಡು ಮೂಲದ ಮುರುಗಂಡಿ ದೇವರ್, ಪ್ರಕಾಶ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಧಿತರು. ಬಂಧಿತರಿಂದ ಕಳ್ಳತನಕ್ಕೆ ಬಳಸಿದ್ದ ಫಿಯೆಟ್ ಕಾರು, ಹಣ, ಚಿನ್ನ ತುಂಬಿಕೊಂಡು ಹೋಗಿದ್ದ ಎರಡು ಗೋಣಿ ಚೀಲಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ ಸುದ್ದಿಗಾರರಿಗೆ ಮಾಹಿತಿ ನೀಡಿದರು. ಮೂವರು ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದ ನಂತರ ಹೆಚ್ಚಿನ ಮಾಹಿತಿ ನೀಡುವುದಾಗಿ ಅವರು ತಿಳಿಸಿದ್ದಾರೆ.
ಆರೋಪಿಗಳ ಬಳಿ ಶಸ್ತ್ರಾಸ್ತ್ರಗಳು, ಎರಡು ತಲ್ವಾರ್, ಎರಡು ಪಿಸ್ತೂಲ್ ಮತ್ತು ಗೋಣಿಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ. ದರೋಡೆಗೆ ಬಳಸಿದ್ದ ಕಾರನ್ನು ಬೆನ್ನಟ್ಟಿದ ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸಿದವು. ದರೋಡೆ ನಡೆಸಿದ ನಂತರ ತಲಪಾಡಿ ಟೋಲ್ ಮೂಲಕ ದರೋಡೆಕೋರರು ಕೇರಳಕ್ಕೆ ಪರಾರಿಯಾಗಿದ್ದರು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಜನಿವಾರ ತೆಗೆಸಿದ ಪ್ರಕರಣ : ಪ್ರಾಂಶುಪಾಲ, ಸಿಬ್ಬಂದಿ ಕೆಲಸದಿಂದ ವಜಾ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement