ಮೈಸೂರು | ಹಾಡಹಗಲೇ ಕಾರು ಅಡ್ಡಗಟ್ಟಿ ಉದ್ಯಮಿಯ ದರೋಡೆ ಮಾಡಿದ ದುಷ್ಕರ್ಮಿಗಳು ; ಕಾರು, ಹಣ ಸಮೇತ ಪರಾರಿ

ಮೈಸೂರು: ಮೈಸೂರು (Mysuru) ಜಿಲ್ಲೆಯಲ್ಲಿ ದುಷ್ಕರ್ಮಿಗಳು ಉದ್ಯಮಿಯೊಬ್ಬರ ಕಾರನ್ನು ಹಾಡಹಗಲೇ ಅಡ್ಡಗಟ್ಟಿ ದರೋಡೆ (Robbery ) ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಉದ್ಯಮಿಯ ಬಳಿ ಇದ್ದ ಹಣ ಕಸಿದುಕೊಂಡು ಕಾರು ಸಮೇತ ಪರಾರಿಯಾದ ಘಟನೆ ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ನಡೆದಿದೆ.
ರಾಜ್ಯದ ಹಲವು ಕಡೆ ದರೋಡೆ ಸುದ್ದಿಗಳು ಕೇಳಿಬರುತ್ತಿರುವ ಮಧ್ಯೆಯೇ ಈ ಘಟನೆ ನಡೆದಿದೆ. ಕೇರಳ ಮೂಲದ ಉದ್ಯಮಿ ಸೂಫಿ ಎಂಬವರಿಗೆ ಸೇರಿದ ಇನ್ನೋವಾ ಕಾರು ಹಾಗೂ ಹಣ ಎಗರಿಸಿಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಎರಡು ಕಾರುಗಳಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿಗಳು ಉದ್ಯಮಿ ಸೂಫಿ ಅವರ ಕಾರನ್ನು ಕಿತ್ತುಕೊಂಡ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಸ್ಥಳಕ್ಕೆ ಡಿವೈಎಸ್‌ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉದ್ಯಮಿ ಸೂಫಿಯಿಂದ ಜಯಪುರ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಮೈಸೂರಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೇವಲ ನಾಲ್ಕೈದು ದಿನಗಳಲ್ಲೇ ಇದು ಮೂರನೆಯ ಘಟನೆಯಾಗಿದೆ. ಬೀದರಿ​​ನಲ್ಲಿ ಎಟಿಎಂಗೆ ಹಣ ತುಂಬಿಸುವವರ ಮೇಲೆ ಶೂಟೌಟ್ ನಡೆಸಿ ಇಬ್ಬರನ್ನು ಸಾಯಿಸಿ ಹಣ ದರೋಡೆ ಮಾಡಲಾಗಿತ್ತು. ಮಂಗಳೂರಿನ ಉಳ್ಳಾಲ ಕೋಟೆಕಾರು ಎಂಬಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿತ್ತು. ಇವುಗಳ ಬೆನ್ನಲ್ಲೇ ಮೈಸೂರಿನಲ್ಲಿಯೂ ಹಾಡಹಗಲೇ ಈ ಘಟನೆ ನಡೆದಿದೆ.

ಪ್ರಮುಖ ಸುದ್ದಿ :-   ಮಾರ್ಚ್‌ ೨೧ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement