ರಾಯಚೂರು : ಕ್ರೂಸರ್ ವಾಹನ ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದು, 10 ಜನರು ಗಾಯಗೊಂಡ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ.
14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನವು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಮೃತರನ್ನು ಮಂತ್ರಾಲಯ ಸಂಸ್ಕೃತ ಪಾಠ ಶಾಲೆಯ ಮೂರು ವಿದ್ಯಾರ್ಥಿಗಳಾದ ಹಯವದನ ( 18), ಸುಜಯೇಂದ್ರ ( 22), ಅಭಿಲಾಷ (20) ಹಾಗೂ ವಾಹನ ಚಾಲಕ ಶಿವ(24) ಎಂದು ಗುರುತಿಸಲಾಗಿದೆ.
ಗಾಯಗೊಂಡ 10 ಜನರನ್ನ ರಾಯಚೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ರೂಸರ್ ವಾಹನದ ಆಕ್ಸಲ್ ಕಟ್ ಆಗಿ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸಿಂಧನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ