ಹಾಸನ: ಕಾಡಾನೆಯೊಂದು (Elephant) ವೃದ್ಧನ ಮೇಲೆ ಏಕಾಏಕಿ ದಾಳಿ ನಡೆಸಿ ಕೊಂದು, ಶವದ ಮೇಲೆ ಕಾಫಿ ಗಿಡ ಮುಚ್ಚಿದ ಘಟನೆ ಆಲೂರು ತಾಲೂಕಿನ ಅಡಿಬೈಲು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಕಾಡಾನೆ ದಾಳಿಗೆ ಬಲಿಯಾದ ವೃದ್ಧರನ್ನು ಪುಟ್ಟಯ್ಯ (78) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಆನೆ ದಾಳಿ ನಡೆಸಿದೆ. ನಂತರ ಕಾಲಿನಿಂದ ತುಳಿದು ಸೊಂಡಿಲಿನಿಂದ ಮೇಲಕ್ಕೆತ್ತಿ ಮರಕ್ಕೆ ಅಪ್ಪಳಿಸಿ ನಂತರ ಬಿಸಾಡಿದೆ. ವೃದ್ಧ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ನಂತರ ಆನೆ ಶವಕ್ಕೆ ಕಾಫಿ ಗಿಡಗಳನ್ನು ಶವದ ಮೇಲೆ ಬೀಳಿಸಿ ಶವ ಕಾಣದಂತೆ ಮಾಡಿ ಹೋಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪುಟ್ಟಯ್ಯ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ರಾತ್ರಿಯೆಲ್ಲ ಹುಡುಕಾಟ ನಡೆಸಿದ್ದರು. ಬುಧವಾರ ಬೆಳಿಗ್ಗೆ ಕಾಫಿ ತೋಟದಲ್ಲಿ ವೃದ್ಧಿನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ( Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ