ಯಲ್ಲಾಪುರ | ಅಪಘಾತದಲ್ಲಿ 11 ಮಂದಿ ಸಾವಿಗೆ ಪ್ರಧಾನಿ ಮೋದಿ ಸಂತಾಪ ; ಕೇಂದ್ರದಿಂದ 2 ಲಕ್ಷ ಪರಿಹಾರ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 11 ಮಂದಿ ಮೃತಪಟ್ಟಿರುವುದಕ್ಕೆ (accident) ಪ್ರಧಾನಿ ನರೇಂದ್ರ ಮೋದಿ ಅಲ್ಲದೇ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ.
ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಸಂತಾಪ ಸೂಚಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ ಎಮದು ತಿಳಿಸಿದ್ದಾರೆ.

ಗಾಯಾಳುಗಳು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ. ಮೃತರ ಪ್ರತಿ ಕುಟುಂಬಕ್ಕೂ ಪಿಎಂಎನ್‌ಆರ್‌ಎಫ್‌ (PMNRF) ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘಟನೆಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಘೋಷಿಸಿದೆ.

ಪ್ರಮುಖ ಸುದ್ದಿ :-   ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು ; ನಾಲ್ವರ ರಕ್ಷಣೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement