ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನಾರಾಯಣ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಟರ್ ಮೀಡಿಯೇಟ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುರುವಾರ ಬೆಳಗ್ಗೆ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಂಕ್ರಾಂತಿ ರಜೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ವಾಪಸಾದ ಸ್ವಲ್ಪ ಸಮಯದಲ್ಲೇ ಬೆಳಗ್ಗೆ 10:30ರ ಸುಮಾರಿಗೆ ವಿದ್ಯಾರ್ಥಿ ಮೂರನೇ ಮಹಡಿಯಿಂದ ಕಳೆಕ್ಕೆ ಜಿಗಿದಿದ್ದಾನೆ ಎಂದು ವರದಿ ತಿಳಿಸಿದೆ.
ವೀಡಿಯೋದಲ್ಲಿ, ವಿದ್ಯಾರ್ಥಿ ತರಗತಿಯಿಂದ ಹೊರಗೆ ಹೋಗುತ್ತಿರುವುದನ್ನು ಕಾಣಬಹುದು, ಕಟ್ಟುಗಳ ಮೇಲೆ ನಿಂತು ಮೂರನೇ ಮಹಡಿಯಿಂದ ಜಿಗಿದಿದ್ದಾನೆ. ಏನಾಯಿತು ಎಂದು ನೋಡಲು ಆತನ ಸಹಪಾಠಿಗಳು ಕೊಠಡಿಯಿಂದ ಹೊರಬಂದರು.
ಬತ್ತಲಪಲ್ಲಿ ಮಂಡಲದ ರಾಮಪುರಂ ನಿವಾಸಿಯಾಗಿರುವ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ. ವಿದ್ಯಾರ್ಥಿ ಕಟ್ಟಡದಿಂದ ಕೆಳಗೆ ಹಾರಿದ್ದನ್ನು ನೋಡಿದ ಶಿಕ್ಷಕ ಮತ್ತು ಸಹಪಾಠಿಗಳು ಆಘಾತಕ್ಕೊಳಗಾಗಿದ್ದಾರೆ.
ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಪ್ರಕರಣದ ತನಿಖೆ ನಡೆಯುತ್ತಿದೆ. ರಜೆಯ ನಂತರ ವಿದ್ಯಾರ್ಥಿ ಗುರುವಾರ ಬೆಳಿಗ್ಗೆ ಕಾಲೇಜಿಗೆ ವಾಪಸ್ ಆಗಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ಸುತ್ತಲಿನ ಸಂದರ್ಭಗಳ ಬಗ್ಗೆ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ, ಪೊಲೀಸರು ಇನ್ನೂ ಅಧಿಕೃತ ಹೇಳಿಕೆಯನ್ನು ನೀಡಬೇಕಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ