ಪತ್ನಿಯ ಮನೆ ಮುಂದೆ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ

ಬೆಂಗಳೂರು : ವಿಚ್ಛೇದನ (divorce) ಅರ್ಜಿಯನ್ನು ಹಿಂಪಡೆಯಲು ಪತ್ನಿ ನಿರಾಕರಿಸಿದ ಹಿನ್ನೆಲೆಯಲ್ಲಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ಗುರುವಾರ ನಡೆದಿದೆ.
ಪತ್ನಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವ್ಯಕ್ತಿ ತನ್ನ ಪತ್ನಿಯ ನಿವಾಸದ ಮುಂದೆಯೇ ಬೆಂಕಿ ಹಚ್ಚಿಕೊಂಡಿದ್ದಾನೆ. ಮೃತ ಪತಿ 39 ವರ್ಷ ವಯಸ್ಸಿನ ಮಂಜುನಾಥ ಕುಣಿಗಲ್ ಪೇಟೆಯಲ್ಲಿ ವಾಸವಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಕ್ಯಾಬ್ ಹೊಂದಿದ್ದರು.
2013 ರಲ್ಲಿ ಅವರ ವಿವಾಹವಾಗಿತ್ತು ಮತ್ತು ಮದುವೆಯ ನಂತರ ಬೆಂಗಳೂರಿನ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು. ಅವರಿಗೆ 9 ವರ್ಷದ ಮಗನೂ ಇದ್ದಾನೆ.

ದಂಪತಿ ನಡುವಿನ ಭಿನ್ನಾಭಿಪ್ರಾಯ ಉಂಟಾಗಿ ಮಂಜುನಾಥ ಎರಡು ವರ್ಷಗಳಿಂದ ತನ್ನ ಹೆಂಡತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಮತ್ತು ದಂಪತಿ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು.
ಈ ಮಧ್ಯೆ ಹೆಂಡತಿಯ ಬಳಿ ಡೈವೋರ್ಸ್ ಬೇಡ ಎಂದು ಹೇಳಿದ್ದ ಮಂಜುನಾಥ್, ಮತ್ತೆ ಒಂದಾಗಿ ಬಾಳೋಣ ಎಂದು ಮನವೊಲಿಸಲು ಎನ್​ಜಿಎಫ್ ಲೇಔಟ್​ನಲ್ಲಿರುವ ಹೆಂಡತಿ ಮನೆಗೆ ಬಂದಿದ್ದ. ಆದರೆ ಇದಕ್ಕೆ ಪತ್ನಿ ನಿರಾಕರಿಸಿದ್ದಾಳೆ. ನೀನು ನನಗೆ ಸಾಕಷ್ಟು ಹಿಂಸೆ ಕೊಟ್ಟಿದ್ದೀಯ, ನಾನು ನಿನ್ನ ಜೊತೆ ಬರೋದಿಲ್ಲ ಎಂದು ಪತ್ನಿ ಹೇಳಿದ್ದಳು. ಡೈವೋರ್ಸ್‌ ಅರ್ಜಿಯನ್ನು ಹಿಂಪಡೆಯಲು ಪತ್ನಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಡಬ್ಬಿ ತಂದು ಆಕೆಯ ಮನೆಯ ಕಾರಿಡಾರ್ ಮುಂದೆ ಬೆಂಕಿ ಹಚ್ಚಿಕೊಂಡು ಸಾವಿಗೀಡಾಗಿದ್ದಾನೆ ಎಂದು ಹೇಳಲಾಗಿದೆ.
ಮಂಜುನಾಥ ಪೋಷಕರು ತಮ್ಮ ಮಗನ ಸಾವಿಗೆ ಪತ್ನಿಯೇ ಕಾರಣ ಎಂದು ಆರೋಪಿಸಿದ್ದಾರೆ. ಜ್ಞಾನಭಾರತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಭಾರೀ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ತತ್ತರ ; ಬುಲ್ಡೋಜರ್‌ ನಲ್ಲಿ ಪರಿಸ್ಥಿತಿ ವೀಕ್ಷಿಸಿದ ಶಾಸಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement