ಬಳ್ಳಾರಿ | ಬೆಳ್ಳಂಬೆಳಿಗ್ಗೆ ಜಿಲ್ಲಾ ಆಸ್ಪತ್ರೆ ಮಕ್ಕಳ ವೈದ್ಯರ ಕಿಡ್ನಾಪ್: 3 ಕೋಟಿ ರೂ. ಹಣದ ಬೇಡಿಕೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ ಅವರನ್ನು ಅಪಹರಿಸಲಾಗಿದೆ ಎಂದುವರದಿಯಾಗಿದೆ.
ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೈಶ್ವರ ದೇವಸ್ಥಾನದ ಬಳಿ ಶನಿವಾರ ಮುಂಜಾನೆ ಅವರು ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಿದ್ದು, ಅಪಹಾರಣಕಾರರು ಮೂರು ಕೋಟಿ ರೂ.ಗಳ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರ ಬಾಯಿಮುಚ್ಚಿ ಕಾರಿನಲ್ಲಿ ಕೂಡ್ರಿಸಿಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ. ಅವರ ಸಹೋದರ ವೇಣು ಅವರು ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷರಾಗಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದ್ದು, ಅಪಹರಣಕಾರರ ಪತ್ತೆಗೆ ಬಲೆ ಬೀಸಿದ್ದಾರೆ. ಅಪಹರಣಕ್ಕೊಳಗಾದ ಡಾ.ಸುನೀಲ ಅವರ ಮೊಬೈಲ್‌ನಿಂದಲೇ ಕರೆ ಮಾಡುತ್ತಿರುವ ಅಪಹರಣಕಾರರು ಮೂರು ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಬಳ್ಳಾರಿ ಎಸ್ಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದ್ದು, ಶೋಧ ಕಾರ್ಯ ನಡೆದಿದೆ. ಚೆಕ್‌ಪೋಸ್ಟ್‌ಗಳಲ್ಲಿ ನಾಕಾಬಂದಿ ಹಾಕಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.

ಪ್ರಮುಖ ಸುದ್ದಿ :-   48 ನಾಯಕರ ಹನಿಟ್ರ್ಯಾಪ್ ಸಿಡಿ ಇದೆ, ನನ್ನ ಮೇಲೂ ಯತ್ನ; ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಮಾಹಿತಿ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement