ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ ನೋಟಿಸ್ ಜಾರಿ ಮಾಡಿದೆ.
ಜ. 9ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಜನವರಿ 3ರಂದು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮೊದಲ ನೋಟಿಸ್ ನೀಡಿತ್ತು. ನೋಟಿಸ್ಗೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ದಾಖಲೆ ಸಂಗ್ರಹಿಸಲು ಎರಡು ವಾರ ಕಾಲಾವಕಾಶ ಕೋರಿದ್ದರು. ಇಡಿ ಪಾರ್ವತಿ ಅವರಿಗೆ ಪತ್ನಿಗೆ ಎರಡನೇ ನೋಟಿಸ್ ನೀಡಿದ್ದು, ಜನವರಿ 28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಹೇಳಲಾಗಿದೆ. ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಹಾಗೂ ಸಿದ್ದರಾಮಯ್ಯ ಆಪ್ತ, ಸಚಿವ ಬೈರತಿ ಸುರೇಶ ಅವರಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಪಾರ್ವತಿ ಸಿದ್ದರಾಮಯ್ಯ ಹಾಗೂ ಭೈರತಿ ಸುರೇಶ ಅವರು ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಇದನ್ನು ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ ಪೀಠಕ್ಕೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ನಿಮ್ಮ ಕಾಮೆಂಟ್ ಬರೆಯಿರಿ