ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನ ಮಳೆಯ ಮುನ್ಸೂಚನೆ

ಬೆಂಗಳೂರು : ಹವಾಮಾನ ಇಲಾಖೆಯು ದಕ್ಷಿಣ ಭಾರತದ ಹೆಚ್ಚಿನ ರಾಜ್ಯಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಕರ್ನಾಟಕದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಅದು ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅದೇರೀತಿ ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ. ಅಲ್ಲದೆ, ತಮಿಳುನಾಡು, ಕೇರಳ, ಆಂಧ್ರಪ್ರದೇಶದ ಕರಾವಳಿಯಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement