ತುಮಕೂರು | ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್‌ ಟ್ಯಾಂಕ್‌ ಸ್ಫೋಟ; ಇಬ್ಬರ ಸಾವು, ಮೂವರಿಗೆ ಗಾಯ

ತುಮಕೂರು: ಪರಿಮಳ ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್ ಟ್ಯಾಂಕ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಅಂತಸರನಹಳ್ಳಿಯಲ್ಲಿರುವ ಇಂಡಸ್ಟ್ರಿಯಲ್ಲಿ ಈ ದುರ್ಘಟನೆ ನಡೆದಿದೆ. ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಟ್ಯಾಂಕ್‌ ಸ್ಪೋಟಗೊಂಡಿದೆ ಎನ್ನಲಾಗಿದೆ. ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಕಾರ್ಮಿಕರನ್ನು ಸಂತೋಷ ಹಾಗೂ ಚಂದನ್ ಶರ್ಮ ಎಂದು ಗುರುತಿಸಲಾಗಿದೆ. ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಂಜೆ 5:30ರ ಸುಮಾರಿಗೆ ತುಮಕೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement