ಶಿರಸಿ : ಬಿಜೆಪಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಎನ್.ಎಸ್. ಹೆಗಡೆ ಕರ್ಕಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಉತ್ತರ ಕನ್ನಡ ಜಿಲ್ಲೆ ಚುನಾವಣಾಧಿಕಾರಿ ಆರ್.ಕೆ. ಸಿದ್ದರಾಮಣ್ಣ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ
ದೀನದಯಾಳ ಭವನದಲ್ಲಿ ಮಾತನಾಡಿದ ಅವರು, ಎಲ್ಲರ ಅಭಿಪ್ರಾಯವನ್ನು ಪಡೆದ ನಂತರ ಸಹಮತದಿಂದಲೇ ಎನ್ ಎಸ್ ಹೆಗಡೆ ಕರ್ಕಿ ಅವರನ್ನು ಮುಂದಿನ ಮೂರು ವರ್ಷದ ಅವಧಿಗೆ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ಎಲ್ಲ ಚುನಾವಣೆಗಳ ಅವರು ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು.
ಸಾರ್ವಜನಿಕರಿಗೆ ಸಂಬಂಧಿಸಿದ ವಿಷಯಗಳಿಗೆ ಧ್ವನಿಯಾಗುವುದು ಹಾಗೂ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡು ಅದನ್ನು ಮುಂದಿನ ಚಿನಾವಣೆಗಾಗಿ ಬಲಿಷ್ಠಗೊಳಿಸುವು ಜವಾಬ್ದಾರಿ ಅವರ ಮೇಲಿದೆ ಎಂದು ಹೇಳಿದರು. ಜಿಲ್ಲೆಯ ಎಲ್ಲಾಕಾರ್ಯಕರ್ತರು ಒಂದು ತಂಡವಾಗಿ ಕೆಲಸ ಮಾಡುತ್ತಾ, ಬೂತ್ ಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಬೇಕು ಎಂದರು.
ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಎನ್.ಎಸ್.ಹೆಗಡೆ ಕರ್ಕಿ ಮಾತನಾಡಿ, ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಹಾಗೂ ಪಕ್ಷ ವಹಿಸಿದ ಹೊಣೆಗಾರಿಕೆಯನ್ನು ಜವಾಬ್ದಾರಿಯಿಂದ ನಿರ್ವಹಿಸುವುದಾಗಿ ತಿಳಿಸಿದರು.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಎನ್.ಎಸ್. ಹೆಗಡೆ ಕರ್ಕಿ, ಬಿಜೆಪಿ ರಾಜ್ಯ ಮಾಧ್ಯಮ ವಕ್ತಾರ ಹರಿಪ್ರಸಾದ ಕೋಣೆಮನೆ, ಪ್ರಮುಖರಾದ ಆರ್ ಡಿ ಹೆಗಡೆ, ಮಾಜಿ ಶಾಸಕ ವಿವೇಕಾನಂದ ವೈದ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್, ನಗರ ಮಂಡಲ ಅಧ್ಯಕ್ಷ ಆನಂದ ಸಾಲೇರ್ ಮಾಜಿ ಅಧ್ಯಕ್ಷ ಎಂ.ಜಿ.ನಾಯ್ಕ, ಕಚೇರಿ ಕಾರ್ಯದರ್ಶಿ ಶ್ರೀರಾಮ ನಾಯ್ಕ ಮೊದಲಾದವರಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ