ಮಹಾಕುಂಭ ಮೇಳ ; ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರಿಗೆ ಗಾಯ

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಿಜೆಪಿ ಕಾರ್ಯಕರ್ತೆಯರು ಹಾಗೂ ಇಬ್ಬರು ಬಾಲಕಿಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇಲ್ಲಿನ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ ಹಾಗೂ ಕಾಂಚನ್ ಕೋಪಾರ್ಡೆ ಎಂಬವರು ಗಾಯಗೊಂಡ ಬಿಜೆಪಿ ಕಾರ್ಯಕರ್ತೆಯರು. ಅವರೊಂದಿಗೇ ಇದ್ದ ಬಾಲಕಿಯರಾದ ಮೇಘಾ, ಜ್ಯೋತಿ ಅವರಿಗೂ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲಿನ ವೈದ್ಯರಿಂದ ನಾಲ್ವರಿಗೂ ಚಿಕಿತ್ಸೆ ನೀಡಲಾಗಿದೆ. ಎಲ್ಲರ ಆರೋಗ್ಯವೂ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಸಂಬಂಧಿಕರಿಗೆ ಬಂದಿದೆ.
ಮೂರು ದಿನಗಳ ಹಿಂದೆ ಎಲ್ಲರೂ ಪ್ರಯಾಗ್‌ರಾಜ್‌ಗೆ ತೆರಳಿದ್ದರು. ಬೆಳಗಾವಿಯ ಸುಮಾರು 500ಕ್ಕೂ ಹೆಚ್ಚು ಯಾತ್ರಾರ್ಥಿಗಳು ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ತೆರಳಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಸಹಕಾರ ಸಚಿವ ಕೆ. ಎನ್‌ ರಾಜಣ್ಣ...!

ನಿಮ್ಮ ಕಾಮೆಂಟ್ ಬರೆಯಿರಿ

advertisement