ಮಹಾಕುಂಭಮೇಳಕ್ಕೆ ತೆರಳಿದ್ದ ಬೆಳಗಾವಿ ವ್ಯಕ್ತಿ ಹೃದಯಾಘಾತದಿಂದ ಸಾವು

ಬೆಳಗಾವಿ: ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಬೆಳಗಾವಿಯ ಮತ್ತೋರ್ವ ವ್ಯಕ್ತಿ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.
ಬೆಳಗಾವಿ ದೇಶಪಾಂಡೆ ಗಲ್ಲಿಯ ನಿವಾಸಿ ರವಿ ಜಠಾರ (61) ಎಂಬವರು ಮೃತಪಟ್ಟವರು. ಪ್ರಯಾಗರಾಜ್ ನಿಂದ ಮರಳಿ ಬರುವಾಗ ರೈಲಿನಲ್ಲಿ ರವಿ ಜಠಾರ ಅವರಿಗೆ ಪುಣೆ ಬಳಿ ಹೃದಯಾಘಾತವಾಗಿದೆ. ಪುಣೆಯಲ್ಲಿ ಸಂಬಂಧಿಕರು, ಸ್ನೇಹಿತರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಭಾನುವಾರ ಅವರು ರೈಲಿನಲ್ಲಿ ಸ್ನೇಹಿತರ ಜೊತೆಗೆ ಪ್ರಯಾಗರಾಜ್‌ಗೆ ತೆರಳಿದ್ದರು. ಯಾತ್ರೆ ಮುಗಿಸಿ ಮರಳಿ ಬರುವಾಗ ಈ ಘಟನೆ ನಡೆದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ

ನಿಮ್ಮ ಕಾಮೆಂಟ್ ಬರೆಯಿರಿ

advertisement