ನವದೆಹಲಿ: ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರ ಮನೆ ಮುಂದೆ ಕಸ ಎಸೆದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಸ್ವಾತಿ ಮಲಿವಾಲ್ ಮತ್ತು ಅವರ ಬೆಂಬಲಿಗರು ವಿಕಾಸಪುರಿಯ ರಸ್ತೆಗಳಿಂದ ಕಸವನ್ನು ಮೂರು ಮಿನಿ ಟ್ರಕ್‌ಗಳಲ್ಲಿ ಸಂಗ್ರಹಿಸಿ ಫಿರೋಜ್‌ಶಾ ರಸ್ತೆಯಲ್ಲಿರುವ ಕೇಜ್ರಿವಾಲ್ ಅವರ ಮನೆಗೆ ತಲುಪಿದರು. ಮಹಿಳಾ ಪೋಲೀಸರು ಅವರನ್ನು ಅಥಳದಿಂದ ವಶಕ್ಕೆ ಪಡೆದು ಕರೆದೊಯ್ಯುವ ಮೊದಲು ಅವರು ಅಲ್ಲಿ ಕಸದ ಗೋರುಗಳನ್ನು ನೆಲದ ಮೇಲೆ ಎಸೆದರು.
ರಾಜ್ಯಸಭಾ ಸಂಸದರಾದ ಸ್ವಾತಿ ಮಲಿವಾಲ್ ಅವರು ಕೇಜ್ರಿವಾಲ್ ನಿವಾಸದ ಹೊರಗೆ ಕಸ ಎಸೆಯುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಮಲಿವಾಲ್ ಅವರು ತಮ್ಮ ಬೆಂಬಲಿಗರೊಂದಿಗೆ ಫಲಕಗಳನ್ನು ಹಿಡಿದಿದ್ದರು.
ಸ್ವಲ್ಪ ಸಮಯದ ನಂತರ, ಮಲಿವಾಲ್ ಅವರನ್ನು ಹಲವಾರು ಪೊಲೀಸ್ ಸಿಬ್ಬಂದಿ ಬಂಧಿಸಿದರು ಮತ್ತು ಪೊಲೀಸ್ ಠಾಣೆಗೆ ಕರೆದೊಯ್ದರು.
ಈ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, “ಇಡೀ ನಗರವು ಕಸದ ತೊಟ್ಟಿಯಾಗಿ ಮಾರ್ಪಟ್ಟಿದೆ … ನಾನು ಅರವಿಂದ ಕೇಜ್ರಿವಾಲ್ ಅವರೊಂದಿಗೆ ಮಾತುಕತೆ ನಡೆಸಲು ಇಲ್ಲಿಗೆ ಬಂದಿದ್ದೇನೆ ಎಂದು ತಿಳಿಸಿದರು
ನಾನು ಅವರಿಗೆ ‘ಸುಧರ್ ಜಾವೋ ವರನಾ ಜನತಾ ಸುಧಾರ್ ದೇಗಿ’ ಎಂದು ಹೇಳುತ್ತೇನೆ … ನಾನು ಅವರ ಗೂಂಡಾಗಳಾಗಲಿ ಅಥವಾ ಅವರ ಪೊಲೀಸರಿಗಾಗಲಿ ಹೆದರುವುದಿಲ್ಲ ಎಂದು ಹೇಳಿದರು.
ಏತನ್ಮಧ್ಯೆ, ಘಟನೆಯ ನಂತರ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದೇವೆ ಹಾಗೂ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ. ಕಾನೂನು ಉಲ್ಲಂಘಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ