ಕಾರವಾರ : ಸಾರಿಗೆ ಸಂಸ್ಥೆ ಬಸ್ಸಿಗೆ ಟಿಪ್ಪರ್ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಾವಿನಗುಂಡಿ ಬಳಿ ಬಳಿ ನಡೆದಿದೆ ಎಂದು ವರದಿಯಾಗಿದೆ.
ಭಟ್ಕಳದಿಂದ ಹಿರೇಕೆರೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ಸಿನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ಟಿಪ್ಪರ್ ಮುಂದಿನಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಈ ಘಟನೆಯಲ್ಲಿ ಬಸ್ಸಿನಲ್ಲಿದ್ದ 21 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಟಿಪ್ಪರ್ ಚಾಲನಿಗೂ ಪೆಟ್ಟಾಗಿದೆ ಎಂದು ಹೇಳಲಾಗಿದೆ. ಈ ಘಟನೆ ಮಾವಿನಗುಂಡಿಯ ಚೆಕ್ ಪೋಸ್ಟ್ ಬಳಿ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ಸಾಗರ ಹಾಗೂ ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ನಿಮ್ಮ ಕಾಮೆಂಟ್ ಬರೆಯಿರಿ