ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಹಾಗೂ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಅವರು ಶನಿವಾರ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ದಿಢೀರ್ ರಾಜೀನಾಮೆ ಕಾಂಗ್ರೆಸ್ನಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತಲುಪಿಸಿದ್ದೇನೆ ಎಂದು ಬಿಆರ್ ಪಾಟೀಲ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಆದರೆ ರಾಜೀನಾಮೆಗೆ ಕಾರಣ ಏನು ಎಂಬುದಕ್ಕೆ ಉತ್ತರಿಸಿದ ಅವರು, ನಾನಾಗಿಯೇ ತನ್ನ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಆದರೆ ಅವರ ದಿಢೀರ್ ನಿರ್ಧಾರ ಕಾಂಗ್ರೆಸ್ ಪಾಳಯದಲ್ಲಿ ಅಚ್ಚರಿಗೆ ಕಾರಣವಾಗಿದೆ.
ಬಿಆರ್ ಪಾಟೀಲ್ ಅವರು ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ರಾಜಕಿಯ ಸಲಹೆಗಾರರಗಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ದಿಢೀರ್ ರಾಜೀನಾಮೆ ನೀಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.ಕಲಬುರಗಿ ಜಿಲ್ಲೆಯ ಆಳಂದ ಶಾಸಕ ಬಿ.ಆರ್. ಪಾಟೀಲ ಅವರು, ಈ ಹಿಂದೆ ಸ್ವಪಕ್ಷದ ವಿರುದ್ಧವೇ ಪತ್ರ ಬರೆಯುವ ಮೂಲಕ ಬಹಿರಂಗವಾಗಿ ಅನುದಾನದ ತಾರತಮ್ಯದ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ಇದೀಗ ಅವರು ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಬಿಗ್ ಶಾಕ್ ಎದುರಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ