ನವದೆಹಲಿ : ಬಾಲಿವುಡ್ ನಟರಾದ ಅಭಿಷೇಕ ಬಚ್ಚನ್ ಮತ್ತು ಐಶ್ವರ್ಯ ರೈ ಬಚ್ಚನ್ ದಂಪತಿ ಪುತ್ರಿ ಆರಾಧ್ಯ ಬಚ್ಚನ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅವರ ಅರ್ಜಿ ಪುರಸ್ಕರಿಸಿದ ದೆಹಲಿ ಹೈಕೋರ್ಟ್ ಈ ಸಂಬಂಧ ಗೂಗಲ್ ಹಾಗೂ ಕೆಲವು ವೆಬ್‌ಸೈಟ್‌ಗಳಿಗೆ ನೋಟಿಸ್ ಜಾರಿ ಮಾಡಿದೆ.
ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುಳ್ಳು ವೀಡಿಯೊಗಳನ್ನು ತೆಗೆದುಹಾಕುವಂತೆ ಆದೇಶ ನೀಡುವಂತೆ ಕೋರಿ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ತನ್ನ ವಿರುದ್ಧ ಗೂಗಲ್ ಸೇರಿದಂತೆ ಕೆಲ ವೆಬ್‌ಸೈಟ್, ಯೂಟ್ಯೂಬ್ ಚಾನೆಲ್ ಸೇರಿದಂತೆ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ತಪ್ಪು ಮಾಹಿತಿ ನೀಡಲಾಗುತ್ತಿದೆ ಇದನ್ನು ನಿರ್ಬಂಧಿಸುವಂತೆ ಹಾಗೂ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೋರಿ ಆರಾಧ್ಯ ಬಚ್ಚನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಉತ್ತರ ನೀಡುವಂತೆ ಸೂಚಿಸಿ ಗೂಗಲ್ ಸೇರಿದಂತೆ ಹಲವು ವೆಬ್‌ಸೈಟ್‌ಗಳಿಗೆ ನೋಟಿಸ್ ನೀಡಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿದೆ. ಈ ಹಿಂದೆ ಅಂದರೆ 2023ರಲ್ಲಿ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ರೈ ಈ ಕುರಿತು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ತಮ್ಮ ಪುತ್ರಿಯ ಖಾಸಗಿ ತನ ಹಾಗೂ ಸುರಕ್ಷತೆ ಕುರಿತು ಕಳವಳ ವ್ಯಕ್ತಪಡಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಹೈಕೋರ್ಟ್ ಹಲವು ಯೂಟ್ಯೂಬ್ ಚಾನೆಲ್‌ಗಳಿಗೆ ವೀಡಿಯೊ ಡಿಲೀಟ್ ಮಾಡುವಂತೆ ಸೂಚನೆ ನೀಡಿತ್ತು.
ದೆಹಲಿ ಹೈಕೋರ್ಟ್‌ಗೆ ಅರಾಧ್ಯ ಬಚ್ಚನ್ ಸಲ್ಲಿಸಿದ ಅರ್ಜಿಯಲ್ಲಿ ಆರಾಧ್ಯ ಬಚ್ಚನ್ ಕುರಿತು ತಪ್ಪು ಮಾಹಿತಿ ಹರಡಲಾಗುತ್ತಿದೆ. ಆಕೆಯ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕುರಿತು ತಪ್ಪು ಮಾಹಿತಿಗಳನ್ನು ನೀಡಲಾಗುತ್ತಿದೆ. ಖಾಸಗಿತನ, ಇತರ ಎಲ್ಲಾ ಮಕ್ಕಳಿಗೆ ಇರುವಂತ ಮೂಲಭೂತ ಹಕ್ಕುಗಳು ಅನ್ವಯವಾಗುತ್ತದೆ. ಆದರೆ ಸೆಲೆಬ್ರೆಟಿ ಪುತ್ರಿ ಎಂಬ ಕಾರಣಕ್ಕೆ ಮೂಲಭೂತ ಹಕ್ಕು ಹಾಗೂ ಖಾಸಗಿತನಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ