ವೀಡಿಯೊ : ಬೆಂಗಳೂರು ; ಮಾಜಿ ಕ್ರಿಕೆಟಿಗ ರಾಹುಲ್‌ ದ್ರಾವಿಡ್ ಕಾರಿಗೆ ಹಿಂದಿನಿಂದ ಗುದ್ದಿದ ಗೂಡ್ಸ್ ಆಟೋ

ಬೆಂಗಳೂರು: ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಂಗಳವಾರ ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಕಾರಿಗೆ ಗೂಡ್ಸ್ ಆಟೋವೊಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಟ್ರಾಫಿಕ್ ಜಾಮ್ ವೇಳೆ ಕಾರಿಗೆ ಗೂಡ್ಸ್ ಆಟೋ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕಾರಿಗೆ ಗೂಡ್ಸ್ ಆಟೋ ಗುದ್ದಿದ ಬಳಿಕ ರಾಹುಲ್ ದ್ರಾವಿಡ್ ಕಾರಿನಿಂದ ಕೆಳಗಿಳಿದು ಪರಿಶೀಲನೆ ನಡೆಸಿದರು. ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಂಗಳವಾರ ಮಂಗಳವಾರ ಸಂಜೆ ಈ ಘಟನೆ ನಡೆದಿದೆ ಎನ್ನಲಾಗಿದೆ.

https://twitter.com/kaniyar_spandan/status/1886799688390906050?ref_src=twsrc%5Etfw%7Ctwcamp%5Etweetembed%7Ctwterm%5E1886799688390906050%7Ctwgr%5Ef7a018fe2380cb624bc0b54a8416b585bcc52b4c%7Ctwcon%5Es1_&ref_url=https%3A%2F%2Fvishwavani.news%2Fkarnataka%2Fbengaluru-urban%2Fformer-india-coach-rahul-dravids-car-met-with-an-accident-in-bengaluru-33339.html

ದ್ರಾವಿಡ್ ಇಂಡಿಯನ್ ಎಕ್ಸ್‌ಪ್ರೆಸ್‌ ಸಿಗ್ನಲ್‌ ಕಡೆಯಿಂದ ಹೈಗ್ರೌಂಡ್ಸ್ ಕಡೆಗೆ ಹೊರಟಿದ್ದರು. ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಈ ವೇಳೆ ಟ್ರಾಫಿಕ್‌ನಲ್ಲಿ ದ್ರಾವಿಡ್ ಕಾರು ನಿಲ್ಲಿಸಿದ್ದರು. ಆಗ ಅವರ ಕಾರಿಗೆ ಹಿಂದಿನಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿಗೆ ಗೂಡ್ಸ್‌ ವಾಹನ ಗುದ್ದಿದ ಬಳಿಕ ರಾಹುಲ್ ದ್ರಾವಿಡ್ ಕಾರಿನಿಂದ ಕೆಳಗಿಳಿದು ಕಾರನ್ನು ಪರಿಶೀಲಿಸಿದ್ದಾರೆ. ಈ ವೇಳೆ ದ್ರಾವಿಡ್ ಹಾಗೂ ಗೂಡ್ಸ್ ಆಟೋ ಚಾಲಕನ‌ ಮಧ್ಯೆ ಸಣ್ಣ ವಾಗ್ವಾದ ಸಹ ನಡೆದಿದೆ. ಟ್ರಾಫಿಕ್​ ಇದ್ದ ಕಾರಣ ದ್ರಾವಿಡ್ ಕಾರು ಮುಂದಿನ ವಾಹನಕ್ಕೆ ಟಚ್​ ಆಗಿದೆ ಎನ್ನಲಾಗಿದೆ. ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಆದರೆ ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.

ಪ್ರಮುಖ ಸುದ್ದಿ :-   ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆಗೆ 90 ವರ್ಷ ; 9 ದಿನ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement