ಶಿರಸಿ | ಶಾಸಕರಿಗೆ ಅವಹೇಳನ ಮಾಡಿದ ಆರೋಪ ; ಅನಂತಮೂರ್ತಿ ಹೆಗಡೆ ವಿರುದ್ಧ ದೂರು

ಶಿರಸಿ ; ಬಿಜೆಪಿ ಮುಖಂಡ ಹಾಗೂ ಹೋರಾಟಗಾರ ಅನಂತಮೂರ್ತಿ ಹೆಗಡೆ ಮೇಲೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ.
ಅನಂತಮೂರ್ತಿ ಹೆಗಡೆ ಸುದ್ದಿಗೋಷ್ಠಿಯಲ್ಲಿ ಶಾಸಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶಿರಸಿ ನಗರ ಪೊಲೀಸ್‌ ಠಾಣೆಯಲ್ಲಿ ಶಿರಸಿ ನಗರ ಸಭೆ ಸದಸ್ಯರಾದ ಪ್ರದೀಪ ಶೆಟ್ಟಿ ಎಂಬವರು ದೂರು ನೀಡಿದ್ದಾರೆ.
ರಾಜ್ಯದ 224 ಶಾಸಕರಲ್ಲಿ ಹೆಚ್ಚು ಸುಳ್ಳು ಹೇಳುವ ಶಾಸಕ ಪ್ರಶಸ್ತಿ ಇದ್ದರೆ ಅದನ್ನು ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರಿಗೆ ಕೊಡಬೇಕು ಎಂದು ಅನಂತಮೂರ್ತಿ ಹೆಗಡೆಯವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಕರ್ನಾಟಕದಲ್ಲಿ ಜನಪ್ರತಿನಿಧಿ ಕಾಯಿದೆ ಅಡಿಯಲ್ಲಿ ಚುನಾಯಿತರಾದ ಎಲ್ಲ 224 ಶಾಸಕರು ಸಾಂವಿಧಾನಿಕ ಅಧಿಕಾರಿ ಹೊಂದಿರುವವರು ಎಂಬುದನ್ನು ಅರಿತಿದ್ದರೂ ಎಲ್ಲ ಶಾಸಕರು ಸುಳ್ಳು ಹೇಳುವವರೆಂದು ಆರೋಪ ಮಾಡಿರುವುದು ಸಮಾಜದಲ್ಲಿ ಅಶಾಂತಿ ಉಂಟುಮಾಡಲು ಪ್ರೇರೇಪಿಸುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಸಾಂವಿಧಾನಿಕ ಅಧಿಕಾರ ಹೊಂದಿರುವ ಶಾಸಕರನ್ನು ಅವಮಾನ ಮಾಡುವ ಉದ್ದೇಶದಿಂದಲೇ ಈ ಪತ್ರಿಕಾಗೋಷ್ಠಿ ಕರೆದಿರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ. ಈ ಪತ್ರಿಕಾಗೋಷ್ಠಿಯಲ್ಲಿ ಎಲ್ಲ 224 ಶಾಸಕರು ಸುಳ್ಳು ಹೇಳುವವರೆಂದು ಹಾಗೂ ಅವರಲ್ಲಿ ಅತೀ ಹೆಚ್ಚು ಸುಳ್ಳು ಹೇಳುವ ಶಾಸಕ ಪ್ರಶಸ್ತಿ ಏನಾದರೂ ಇದ್ದರೆ ಶಾಸಕ ಭೀಮಣ್ಣ ನಾಯ್ಕರಿಗೆ ನೀಡಬೇಕು ಎಂದು ಉದ್ದೇಶಪೂರ್ವಕವಾಗಿ ಶಾಸಕರಿಗೆ ಅಪಮಾನ ಮಾಡಬೇಕು ಎಂಬ ಕಾರಣದಿಂದ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರಲ್ಲಿ ಭೀತಿ ಉಂಟು ಮಾಡುವ ಉದ್ದೇಶದಿಂದ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಶಾಸಕರ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಆದ್ದರಿಂದ ಅವರ ಮೇಲೆ ಹಾಗೂ ಅವರ ಜೊತೆಗಿದ್ದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದೂರು ಸಲ್ಲಿಸಿದ್ದಾರೆ.

ಪ್ರಮುಖ ಸುದ್ದಿ :-   19 ಸಾಧಕರಿಗೆ 2024-25ನೇ ಸಾಲಿನ ವಿವಿಧ ಪ್ರಶಸ್ತಿ ಪ್ರಕಟಿಸಿದ ರಾಜ್ಯ ಸರ್ಕಾರ ; ವಿವೇಕ ರೈಗೆ ಪಂಪ ಪ್ರಶಸ್ತಿ, ಡಾ. ಗುಂಜಾಳಗೆ ಬಸವ ಪುರಸ್ಕಾರ

4 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement