ಸುರಪುರ | ಬಸ್-ಬೈಕ್ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು

ಯಾದಗಿರಿ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳ್ಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ.
ಮೃತರಲ್ಲಿ ಮೂವರು ಮಕ್ಕಳಾಗಿದ್ದಾರೆ. ಸುರಪುರದಿಂದ ತಿಂಥಣಿಯತ್ತ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೃತರನ್ನು ಹನುಮಂತ ಆಂಜನೇಯ (35), ಗಂಗಮ್ಮ (28), ಹಣಮಂತ (1), ಹನುಮಂತನ ಸಹೋದರನ ಮಕ್ಕಳಾದ ಪವಿತ್ರಾ (5) ಹಾಗೂ ರಾಯಪ್ಪ (3) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಶಹಾಪುರ ತಾಲೂಕಿನ ಹಳಿಸಗರ ಗ್ರಾಮದವರಾಗಿದ್ದಾರೆ.
ಶುಕ್ರವಾರ ನಡೆಯಲಿದ್ದ ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕೆಂದು ರಾಯಚೂರು ಜಿಲ್ಲೆಯ ಲಿಂಗಸೂಗೂರ ತಾಲೂಕಿನ ಗುರುಗುಂಟಾ ಗ್ರಾಮಕ್ಕೆ ಬೈಕಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸುರಪುರದಿಂದ ತಿಂಥಣಿಯತ್ತ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಗುದ್ದಿದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇಬ್ಬರು ಸುರಪುರ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ, ಸುರಪುರ ಡಿವೈಎಸ್ಪಿ, ಸಿಪಿಐ, ಸುರಪುರ, ಪಿಐ ಭೇಟಿ ನೀಡಿ ಪರಿಶೀಲಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸರ್ಕಾರದ ನಿರ್ಧಾರ...?!

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement