ಮುಡಾ ಪ್ರಕರಣ : ಹೈಕೋರ್ಟ್‌ನಿಂದ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ಕೋರಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ. ಇದರಿಂದ ಸಿದ್ದರಾಮಯ್ಯ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ತಿರಸ್ಕರಿಸಿದೆ.
ಲೋಕಾಯುಕ್ತ ಸಂಸ್ಥೆಯು ನಡೆಸಿರುವ ತನಿಖೆಯು ಲೋಪದೋಷ, ಪಕ್ಷಪಾತದಿಂದ ಕೂಡಿದೆ ಎಂದು ತನಿಖಾ ವರದಿಯನ್ನು ಪರಿಶೀಲಿಸಿದಾಗ ಕಂಡುಬಂದಿಲ್ಲ. ಹೀಗಾಗಿ, ತನಿಖೆ ನಡೆಸಲು ಸಿಬಿಐಗೆ ಹಸ್ತಾಂತರಿಸಲು ಆಗುವುದಿಲ್ಲ. ಬಾಹ್ಯ ಶಕ್ತಿಗಳಿಂದ ಲೋಕಾಯುಕ್ತ ಸಂಸ್ಥೆಯು ಪ್ರಭಾವಕ್ಕೆ ತುತ್ತಾಗುವ ಸಾಧ್ಯತೆಯ ಬಗ್ಗೆ ಈಗಾಗಲೇ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ತಮ್ಮ ತೀರ್ಪುಗಳಲ್ಲಿ ಹೇಳಿವೆ. ಈ ಎಲ್ಲಾ ವಿಚಾರಗಳ ಹಿನ್ನೆಲೆಯಲ್ಲಿ ಅರ್ಜಿ ವಜಾ ಮಾಡಲಾಗಿದೆ” ಎಂದು ನ್ಯಾಯಾಲಯವು ಆದೇಶಿಸಿದೆ.
ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ (Snehamayi Krishna) ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೋರ್ಟ್ ಪೂರ್ಣಗೊಳಿಸಿ‌ ಕಾಯಿರಿಸಿದ್ದ ತೀರ್ಪನ್ನು ಇಂದು ಶುಕ್ರವಾರ ಪ್ರಕಟಿಸಿತು. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಹೇಳಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದೆ.
ತೀರ್ಪು ಪ್ರಕಟವಾದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಅವರು, ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದರು. ಆದೇಶ ಪ್ರತಿ ಸಿಕ್ಕಿದ ಕೂಡಲೇ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇನೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಬೆಳಗಾವಿ | ಕಾರಿನ ಮೇಲೆ ಮಗುಚಿ ಬಿದ್ದ ಲಾರಿ ; ಇಬ್ಬರಿಗೆ ಗಾಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement