ಪೋಕ್ಸೊ ಪ್ರಕರಣ ; ಮಾಜಿ ಸಿಎಂ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಅವರಿಗೆ ಸದ್ಯಕ್ಕೆ ಬಂಧನದ ಭೀತಿ ಇಲ್ಲವಾಗಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಆದರೆ, ಪೀಠವು ಈ ಪ್ರಕರಣವನ್ನು ರದ್ದು ಮಾಡಲು ನಿರಾಕರಿಸಿದೆ. ಪೋಕ್ಸೊ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಲಾಗಿದೆ ಎಂದು ಪೀಠ ಆದೇಶಿಸಿದೆ. ವಿಚಾರಣಾ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರಿಯಲಿದೆ.
ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌, ಆನಂತರ ಸಿಐಡಿ ಸಲ್ಲಿಸಿರುವ ಆರೋಪ ಪಟ್ಟಿ ಹಾಗೂ ಅದನ್ನು ಆಧರಿಸಿ ಸಕ್ಷಮ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ವಜಾ ಮಾಡಬೇಕು ಮತ್ತು ಪ್ರಕರಣದಲ್ಲಿ ತನಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಯಡಿಯೂರಪ್ಪ ಅವರು ಪ್ರತ್ಯೇಕ ಎರಡು ಅರ್ಜಿಗಳನ್ನು ಸಲ್ಲಿಸಿದ್ದರು. ಅಲ್ಲದೇ, ಪೋಕ್ಸೊ ಪ್ರಕರಣದಲ್ಲಿ ಇತರೆ ಆರೋಪಿಗಳು ಪ್ರತ್ಯೇಕವಾಗಿ ಪ್ರಕರಣ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯೂ ಸೇರಿ ಎಲ್ಲಾ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಶುಕ್ರವಾರ ಪ್ರಕಟಿಸಿತು. “ಪೋಕ್ಸೊ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಲಾಗಿದೆ” ಎಂದು ಪೀಠ ಆದೇಶಿಸಿತು.
“ಎಫ್‌ಐಆರ್‌, ಸಿಐಡಿ ತನಿಖೆ ನಡೆಸಿ ಸಲ್ಲಿಸಿರುವ ಆರೋಪ ಪಟ್ಟಿ ಹಾಗೂ ಅದನ್ನು ಆಧರಿಸಿ ಸಕ್ಷಮ ನ್ಯಾಯಾಲಯ 4.7.2024ರಂದು ಸಂಜ್ಞೇ ಪರಿಗಣಿಸಿರುವ ಆದೇಶ ಪ್ರಶ್ನಿಸಿದ್ದ ಯಡಿಯೂರಪ್ಪ ಅರ್ಜಿಯನ್ನು ಭಾಗಶಃ ಪುರಸ್ಕರಿಸಲಾಗಿದೆ. ಸಕ್ಷಮ ನ್ಯಾಯಾಲಯವು ಸಂಜ್ಞೇ ಪರಿಗಣಿಸಿರುವ ಆದೇಶವನ್ನು ಯಡಿಯೂರಪ್ಪ ಅವರಿಗೆ ಸೀಮಿತವಾಗಿ ವಜಾ ಮಾಡಲಾಗಿದೆ. ಅಪರಾಧ, ತನಿಖೆ, ಅಂತಿಮ ವರದಿ ಎಲ್ಲವೂ ಹಾಗೆ ಉಳಿಯಲಿದೆ.

ಪ್ರಮುಖ ಸುದ್ದಿ :-   ವಾಯುಭಾರ ಕುಸಿತ : ಕರ್ನಾಟಕದಲ್ಲಿ ಮೇ 24ರ ವರೆಗೆ ಭಾರಿ ಮಳೆ ಮುನ್ನೆಚ್ಚರಿಕೆ ; 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement