ಎನ್‌ ಕೌಂಟರ್‌ನಲ್ಲಿ 12 ಮಾವೋವಾದಿಗಳ ಹತ್ಯೆ , ಇಬ್ಬರು ಯೋಧರು ಹುತಾತ್ಮ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 12 ಮಾವೋವಾದಿಗಳು ಹತರಾಗಿದ್ದಾರೆ, ಇದೇವೇಳೆ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಪೊಲೀಸಗಗ ಅಧಿಕಾರಿಯೊಬ್ಬರು ಭಾನುವಾರ ಬೆಳಿಗ್ಗೆ ತಿಳಿಸಿದ್ದಾರೆ.
ಉದ್ಯಾನದ ನಿರ್ದಿಷ್ಟ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳ ಜಂಟಿ ತಂಡವು ಸ್ಥಳಕ್ಕೆ ತೆರಳಿದ ನಂತರ ಎನ್‌ಕೌಂಟರ್ ನಡೆದಿದೆ.
ಎನ್‌ಕೌಂಟರ್‌ನಲ್ಲಿ ಹತರಾದ ಜವಾನರು ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಮತ್ತು ವಿಶೇಷ ಕಾರ್ಯಪಡೆ (ಎಸ್‌ಟಿಎಫ್) – ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ಪರಿಣತಿ ಹೊಂದಿರುವ ರಾಜ್ಯ ಮಟ್ಟದ ಪಡೆಗಳಿಗೆ ಸೇರಿದವರು ಎಂದು ಬಸ್ತಾರ್ ರೇಂಜ್‌ನ ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ದೃಢಪಡಿಸಿದ್ದಾರೆ.
ಇತರ ಇಬ್ಬರು ಯೋಧರಿಗೆ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೆಲಿಕಾಪ್ಟರ್‌ನಲ್ಲಿ ರಾಯ್ಪುರಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಹತರಾದ ಮಾವೋವಾದಿಗಳನ್ನು ಗುರುತಿಸಲಾಗುತ್ತಿದೆ ಮತ್ತು ಭದ್ರತಾ ಪಡೆಗಳು ಸ್ಥಳದಿಂದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ ಎಂದು ಅವರು ಹೇಳಿದರು.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಈ ವರ್ಷ ನಡೆದ ಎರಡನೇ ಎನ್‌ಕೌಂಟರ್ ಇದಾಗಿದ್ದು, ಜನವರಿ 12 ರಂದು ಮೂವರು ಮಾವೋವಾದಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಅಬುಜ್ಮದ್‌ಗೆ ಹೊಂದಿಕೊಂಡಿರುವ ರಾಷ್ಟ್ರೀಯ ಉದ್ಯಾನವನ ಪ್ರದೇಶವು ಮಾವೋವಾದಿಗಳಿಗೆ ಸುರಕ್ಷಿತ ತಾಣವಾಗಿದೆ ಎಂದು ನಂಬಲಾಗಿದೆ. 2,799.08 ಚದರ ಕಿಲೋಮೀಟರ್‌ಗಳಲ್ಲಿ ಹರಡಿರುವ ಈ ಉದ್ಯಾನವನವು ಮಹಾರಾಷ್ಟ್ರದೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ ಮತ್ತು 1983 ರಲ್ಲಿ ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಿಸಲಾಯಿತು.
ಈ ವರ್ಷ ಇಲ್ಲಿಯವರೆಗೆ 62 ಮಾವೋವಾದಿಗಳು ಎನ್‌ಕೌಂಟರ್‌ಗಳಲ್ಲಿ ಹತರಾಗಿದ್ದಾರೆ ಮತ್ತು ಛತ್ತೀಸ್‌ಗಢದಲ್ಲಿ ಮಾವೋವಾದಿಗಳ ವಿರುದ್ಧ ಹೋರಾಡಿ 11 ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಈ ವರ್ಷ ಬಿಜಾಪುರದ ಐವರು ಸೇರಿದಂತೆ ಕನಿಷ್ಠ ಒಂಬತ್ತು ನಾಗರಿಕರನ್ನು ಮಾವೋವಾದಿಗಳು ಹತ್ಯೆ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ | ಸರ್ಕಾರಿ ಆಸ್ಪತ್ರೆಯಲ್ಲಿ ವೃದ್ಧ ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ದರದರನೆ ಎಳೆದೊಯ್ದ ವೈದ್ಯ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement