ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ಜಾರಿ ನಿರ್ದೇಶನಾಲಯ ಜಾರಿ ಮಾಡಿದ ಸಮನ್ಸ್‌ಗೆ ನೀಡಿದ ತಡೆಯಾಜ್ಞೆ ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.
ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಇಡಿ ಸಮನ್ಸ್ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ. 20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ. ಬಿ.ಎಂ. ಪಾರ್ವತಿ ಹಾಗೂ ಬೈರತಿ ಸುರೇಶ್ಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಫೆಬ್ರವರಿ 10ರ ವರೆಗೆ ಇಡಿ ನೀಡಿದ್ದ ಸಮನ್ಸ್‌ಗೆ ತಡೆ ನೀಡಿದ್ದರು. ಈಗ ಫೆಬ್ರವರಿ 20 ರವರೆಗೆ ತಡೆಯಾಜ್ಞೆಯನ್ನು ವಿಸ್ತರಿಸಲಾಗಿದೆ.
ಇಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ ಕಾಮತ್ ಸಚಿವ ಬೈರತಿ ಸುರೇಶ ಪರ ಸಿ.ವಿ.ನಾಗೇಶ ಹಾಗೂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಪರವಾಗಿ ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿದರು.
ಜಾರಿ ನಿರ್ದೇಶನಾಲಯ ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ ಅರವಿಂದ್ ಕಾಮತ್ ಅವರು ಆಕ್ಷೇಪಣೆ ಸಲ್ಲಿಸಲು ಅವಕಾಶ ಕೋರಿದರು. ಹೀಗಾಗಿ, ಕಾಮತ್ ಅವರಿಗೆ ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಆದೇಶಿಸಿದ ನ್ಯಾಯಾಲಯವು ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿತು.
ನಿಮ್ಮ ಕಾಮೆಂಟ್ ಬರೆಯಿರಿ