ಬೆಂಗಳೂರು-ಧಾರವಾಡ ವಂದೇ ಭಾರತ ರೈಲು ಬೆಳಗಾವಿ ವರೆಗೆ ವಿಸ್ತರಣೆ ; ಶೆಟ್ಟರ

ಬೆಳಗಾವಿ : ಬೆಂಗಳೂರು-ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ” ರೈಲು ಸಂಚಾರವನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸಲಾಗಿದ್ದು, ನೂತನ ವೇಳಾ ಪಟ್ಟಿಯಂತೆ ಶೀಘ್ರದಲ್ಲಿ ತನ್ನ ನೂತನ ಸಂಚಾರವನ್ನು ಬೆಳಗಾವಿಯಿಂದ ಆರಂಭಿಸಲಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ತಿಳಿಸಿದ್ದಾರೆ.
ಈ ಕುರಿತು ಫೆಬ್ರವರಿ 10ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರೊಂದಿಗೆ, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ ಜೋಶಿ ಹಾಗೂ ಜಗದೀಶ ಶೆಟ್ಟರ ಸಭೆ ನಡೆಸಿದ ನಂತರ ಈ ನಿರ್ಧಾರ ಕೈಕೊಳ್ಳಲಾಗಿದೆ.

ಪ್ರಸ್ತಾಪಿತ ರೈಲಿನ ಸೇವೆಯನ್ನು ಬೆಳಗಾವಿಯ ವರೆಗೆ ವಿಸ್ತರಿಸುವ ಕುರಿತು ಅನೇಕ ತಿಂಗಳುಗಳಿಂದ ಜಗದೀಶ ಶೆಟ್ಟರ ಅವರು ಪ್ರಯತ್ನಿಸುತ್ತಿದ್ದು, ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಯವರನ್ನು ಸಹ ಭೇಟಿ ಮಾಡಿ ವಿನಂತಿಸಿದ್ದು ಹಾಗೂ ಈ ನಿಟ್ಟಿನಲ್ಲಿ ಅನೇಕ ಬಾರಿ ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವಿ, ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಕೋರಿಕೆ ಸಲ್ಲಿಸಿದ್ದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಡನೆ ಸಹ ನೈರುತ್ಯ ವಲಯದ ರೇಲ್ವೆ ಮಹಾ ಪ್ರಬಂಧಕ ಸಂಜೀವ ಶ್ರೀವಾತ್ಸವ ಅವರೊಡನೆ ಸಭೆ ನಡೆಸಿದ್ದರು. ಅ ಬೆಳಗಾವಿ ನಿವಾಸಿಗಳ ಅನೇಕ ದಿನಗಳ ಬೇಡಿಕೆ ಈಡೇರಿದೆ ಎಂದು ಜಗದೀಶ ಶೆಟ್ಟರ ತಿಳಿಸಿದ್ದಾರೆ.
ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮತ್ತು ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ವಂದೇ ಭಾರತ ರೈಲನ್ನು ಬೆಳಗಾವಿ ವರೆಗೆ ವಿಸ್ತರಿಸುವ ಕುರಿತು ಈ ಹಿಂದೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಬೆಳಗಾವಿ ಶಾಸಕ ಅಭಯ ಪಾಟೀಲ್ ಸಹ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ಬೆಳಗಾವಿ ಮಹಾನಗರ ಪಾಲಿಕೆ : ಮಂಗೇಶ ನೂತನ ಮೇಯರ್‌, ವಾಣಿ ಜೋಶಿ ಉಪಮೇಯರ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement