ಮೈಸೂರು | ಅವಹೇಳನಕಾರಿ ಪೋಸ್ಟ್ : ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ; ಲಾಠಿ ಚಾರ್ಜ್

ಮೈಸೂರು: ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಅವಹೇಳನಕಾರಿ ಪೋಸ್ಟ್‌ ಮೈಸೂರಿನಲ್ಲಿ ಕೋಮು ಉದ್ವಿಗ್ನತೆ (Communal tension)ಗೆ ಕಾರಣವಾಗಿದೆ. ಒಂದು ಸಮುದಾಯದ ನೂರಾರು ಯುವಕರು ಪೊಲೀಸ್ ಠಾಣೆ ಹಾಗೂ ಡಿಸಿಪಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಮೈಸೂರಿನ ಕಲ್ಯಾಣಿಗಿರಿ ನಿವಾಸಿ ಸುರೇಶ ಎಂಬವರನ್ನು ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಈ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ನಂತರ ಉದ್ರಿಕ್ತಗೊಂಡ ನೂರಾರು ಮಂದಿ ದಿಢೀರ್ ಪ್ರತಿಭಟನೆ ನಡೆಸಿದ್ದು, ಆತನನ್ನು ತಮ್ಮ ಕೈಗೊಪ್ಪಿಸಬೇಕೆಂದು ಆಗ್ರಹಿಸಿದ್ದಾರೆ. ಈ ವೇಳೆ ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆದಿದೆ. ಇದರಿಂದಾಗಿ ಅನೇಕ ಪೊಲೀಸರಿಗೂ ಗಾಯಗಳಾಗಿವೆ ಎಂದು ವರದಿಯಾಗಿದೆ.

ಅನೇಕ ಪೊಲೀಸ್‌ ವಾಹನಗಳಿಗೆ ಹಾನಿಯಾಗಿದೆ. ನಂತರ ಗುಂಪನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಆಗ ಗುಂಪಿನಲ್ಲಿದ್ದವರು ಚದುರಿದ್ದಾರೆ. ಶಾಂತಿನಗರ ಮುಖ್ಯರಸ್ತೆ, ಮಹದೇವಪುರ ರಸ್ತೆ ಬಂದ್‌ ಮಾಡಿ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.ಸದ್ಯ ಉದಯಗಿರಿ ಠಾಣೆಯ ಪೊಲೀಸರು ಆರೋಪಿ ಸುರೇಶ ಎಂಬವರ ವಿರುದ್ಧ ದೂರು ದಾಖಲಿಸಿ ಬಂಧಿಸಿದ್ದಾರೆ.

ಪ್ರಮುಖ ಸುದ್ದಿ :-   ಧಾರವಾಡದಲ್ಲೂ ಜನಿವಾರ ಕತ್ತರಿಸಿ ಸಿಇಟಿ ಬರೆಸಿದ ಸಿಬ್ಬಂದಿ...!?

ದೆಹಲಿ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ ಯಾದವ್ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಫೋಟೋಗಳನ್ನುತಿರುಚಿ  ತಲೆ ಮೇಲೆ ಸಮುದಾಯವೊಂದರ ಬಗ್ಗೆ ಕೆಲ ಆಕ್ಷೇಪಾರ್ಹ ಪದಗಳನ್ನು ಬರೆದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದಕ್ಕೆ ಆಕ್ರೋಶಗೊಂಡ ಒಂದು ಸಮುದಾಯದ ಜನರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದಾಗ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ವಾತಾವರಣ ನಿಯಂತ್ರಣದಲ್ಲಿದ್ದರೂ ಉದ್ವಿಗ್ನತೆಯಿಂದ ಕೂಡಿದ್ದು, ಕಟ್ಟೆಚ್ಚರ ವಹಿಸಲಾಗಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement