ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಈ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸಲು ರಾಜ್ಯ ಸರ್ಕಾರಕ್ಕೆ ಆರು ತಿಂಗಳ ಕಾಲಾವಕಾಶವನ್ನು ರಾಜ್ಯಪಾಲರು ನೀಡಿದ್ದಾರೆ.
ಈ ಹಿಂದೆ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಫೈನಾನ್ಸ್ ಕುರಿತ ಸುಗ್ರೀವಾಜ್ಞೆಯನ್ನು ಕಳುಹಿಸಿತ್ತು. ಆದರೆ ರಾಜಭವನ ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿತ್ತು. ನಂತರ ರಾಜ್ಯಪಾಲರು ಕೋರಿದ ವಿವರಣೆಯೊಂದಿಗೆ ಮೈಕ್ರೋ ಫೈನಾನ್ಸ್ಗೆ ಸಂಬಂಧಿಸಿದ ಸುಗ್ರೀವಾಜ್ಞೆಯನ್ನು ಸರ್ಕಾರ ರಾಜಭವನಕ್ಕೆ ಪುನಃ ಕಳುಹಿಸಿತ್ತು. ಈಗ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹಲವಾರು ಜನ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಡಿವಾಣ ಹಾಕಲು ಮುಂದಾಗಿದೆ. ಮುಂದಿನ ಅಧಿವೇಶನದಲ್ಲಿ ಅದರ ಸಾಧಕ ಮತ್ತು ಬಾಧಕಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಬೇಕಿದೆ.
ನಿಮ್ಮ ಕಾಮೆಂಟ್ ಬರೆಯಿರಿ