ಐಪಿಎಲ್- 2025 | ಆರ್‌ಸಿಬಿ ತಂಡಕ್ಕೆ ನೂತನ ನಾಯಕನ ಘೋಷಣೆ

ಬೆಂಗಳೂರು: ಬಲಗೈ ಬ್ಯಾಟರ್ ರಜತ ಪಾಟೀದಾ‌ರ ಅವರು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ.
2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆರಂಭಕ್ಕೂ ಮುನ್ನ ಆರ್‌ಸಿಬಿ ತಂಡವು ಈ ನಿರ್ಧಾರ ಪ್ರಕಟಿಸಿದೆ.
ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಮತ್ತೆ ತಂಡದ ನಾಯಕತ್ವ ನೀಡಲಾಗುತ್ತದೆ ಎಂಬ ಊಹಾಪೋಹಗಳ ಮಧ್ಯೆ ರಜತ ಪಾಟೀದಾರ ಅವರನ್ನು ತಂಡದ ನಾಯಕನನ್ನಾಗಿ ಮಾಡಲು ನಿರ್ಧರಿಸಿದೆ.
2013ರಿಂದ 2021ರವರೆಗೆ ಆರ್‌ಸಿಬಿ ತಂಡವನ್ನು ಕೊಹ್ಲಿ ಮುನ್ನಡೆಸಿದ್ದರು. 2022ರಿಂದ 2024ರವರೆಗೆ ದಕ್ಷಿಣ ಆಫ್ರಿಕಾದ ಫಫ್ ಡುಪ್ಲೆಸಿ ತಂಡದ ನೇತೃತ್ವ ವಹಿಸಿದ್ದರು.
ಹರಾಜಿಗೆ ಮುಂಚಿತವಾಗಿ ಆರ್‌ಸಿಬಿ ರಿಟೇನ್ ಮಾಡಿಕೊಂಡ ಆಟಗಾರರಲ್ಲಿ 31 ವರ್ಷ ವಯಸ್ಸಿನ ರಜತ ಪಾಟೀದಾರ ಕೂಡ ಒಬ್ಬರಾಗಿದ್ದಾರೆ. ಈಗ ಐಪಿಎಲ್‌ನಲ್ಲಿ ಚೊಚ್ಚಲ ಕಿರೀಟ ಗೆಲ್ಲುವ ದೊಡ್ಡ ಸವಾಲು ಅವರ ಮುಂದಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement