ನವದೆಹಲಿ : ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಅವರ ಕಾರು ಪಂಜಾಬಿನ ಪಟಿಯಾಲ ಬಳಿ ಅಪಘಾತವಾಗಿದ್ದು, ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶಾಂತಕುಮಾರ ಹಾಗೂ ತಮಿಳುನಾಡಿನ ಮತ್ತೊಬ್ಬ ರೈತ ಮುಖಂಡರಿಗೆ ಗಅಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಕುರುಬೂರು ಶಾಂತಕುಮಾರ ಅವರನ್ನು ಪಟಿಯಾಲದ ರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಕರ್ನಾಟಕ ರಾಜ್ಯ ಸಂಯುಕ್ತ ಕಿಸಾನ್ ಮೋರ್ಚಾದ ಸಂಚಾಲಕ ಕುರುಬೂರು ಶಾಂತಕುಮಾರಅವರು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ(MSP) ಜಾರಿ ಮಾಡಬೇಕು ಎಂದು ಒತ್ತಾಯಿಸಿ ದೆಹಲಿಯ ಕನೋಲಿ ಗಡಿಯ ಬಳಿ ನಡೆಯುತ್ತಿದ್ದ ಪ್ರತಿಭಟನೆ ಸಂಬಂಧಿಸಿದ ಸಭೆಗೆ ಕುರುಬೂರು ಶಾಂತಕುಮಾರ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಶಾಂತಕುಮಾರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
ಈ ಅಪಘಾತದ ಬೆನ್ನಲ್ಲೇ ತಮಿಳುನಾಡಿನ ರೈತ ಸಂಘದ ಅಧ್ಯಕ್ಷ ಟಿ.ಆರ್. ಪಾಂಡಿಯನ್ ಸೇರಿದಂತೆ ಇತರ ರೈತ ನಾಯಕರು, ಸಿಬ್ಬಂದಿ ಸಹ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ