ಬೆಳಗಾವಿ : ಆಟೋ ಚಾಲಕನಿಂದ ಹಲ್ಲೆಗೊಳಗಾದ ಕೆಲವೇ ಕ್ಷಣಗಳಲ್ಲಿ ಗೋವಾದ ಮಾಜಿ ಶಾಸಕ ಸಾವು

ಬೆಳಗಾವಿ : ಬೆಳಗಾವಿಗೆ ಬಂದಿದ್ದ ಗೋವಾದ ಮಾಜಿ ಶಾಸಕರ ಲಾವೋ ಮಾಮಲೇದಾರ (69) ಜೊತೆಗೆ ಕ್ಷುಲ್ಲಕ ಕರಣಕ್ಕೆ ಜಗಳ ಆರಂಭಿಸಿದ ಆಟೋ ಚಾಲಕ ಅವರ ಮೇಲೆ ಹಲ್ಲೆ ಮಾಡಿದ್ದು, ನಂತರ ಮಾಜಿ ಶಾಸಕರು ಅಲ್ಲಿಂದ ಲಾಡ್ಜ್ ಒಳಗೆ ಬರುವಾಗ ಕುಸಿದು ಬಿದ್ದು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ.
ಬೆಳಗಾವಿಯ ಖಡೇಬಜಾರ್ ಮಾರುಕಟ್ಟೆಯ ಶ್ರೀನಿವಾಸ ವಸತಿ ಗೃಹ (ಲಾಡ್ಜ್)ದ ಬಳಿ ಈ ಘಟನೆ ನಡೆದಿದೆ. ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೋ ಮಾಮಲೇದಾರ ಇಂದು, ಶನಿವಾರ ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ಬೆಳಗಾವಿಯ ಖಡೇಬಜಾರ್ ಬಳಿಕ ಆಟೋಗೆ ಅವರ ಕಾರು ಟಚ್ ಆಗಿದೆ. ನಂತರ ಲಾಡ್ಜ್‌ನ ಬಳಿ ಬಂದ ಮಾಜಿ ಶಾಸಕ ಲಾವೋ ಮಾಮಲೇದಾರ್ ಅವರನ್ನು ಹಿಂಬಾಲಿಸಿಕೊಂಡು ಬಂದ ಆಟೋ ಚಾಲಕ ಲಾಡ್ಜ್ ಬಳಿ ಜಗಳ ಆರಂಭಿಸಿದ್ದಾನೆ.

ಆಗ ಮಾತಿಗೆ ಮಾತು ಬೆಳೆದು ಲಾವೋ ಮಾಮಲೇದಾರ ಅವರ ಮೇಲೆ ಆಟೋ ಚಾಲಕ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಆಗ ಸ್ಥಳೀಯರು ಹಾಗೂ ಲಾಡ್ಜ್‌ನ ಸಿಬ್ಬಂದಿ ಬಂದು ಇಬ್ಬರ ಜಗಳವನ್ನು ಬಿಡಿಸಿದ್ದಾರೆ. ನಂತರ ಮಾಜಿ ಶಾಸಕ ಲಾವೂ ಮಾಮಲೇದಾರ ಅವರು ತಾವು ತಂಗಿದ್ದ ಲಾಡ್ಜ್‌ನ ಮೆಟ್ಟಿಲನ್ನೇರಿ ತಮ್ಮ ರೂಮಿಗೆ ಹೋಗಲು ಮುಂದಾಗಿದ್ದಾರೆ. ಆದರೆ, ಏಕಾಏಕಿ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗಿದೆ. ಲಾವೂ ಮಾಮಲೇದಾರ್ ಮೃತ ದೇಹವನ್ನು ಬೆಳಗಾವಿ ಬಿಮ್ಸ್‌ಗೆ ರವಾನೆ ಮಾಡಲಾಗಿದೆ. ನಂತರ, ಘಟನೆಯ ಸಂಪೂರ್ಣ ದೃಶ್ಯ ಲಾಡ್ಜ್‌ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ತಕ್ಷಣವೇ ಆರೋಪಿಯನ್ನು ಮಾರ್ಕೆಟ್ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹ ಮಾಡಿದ್ದಾರೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ವಾಯು ವಿಹಾರಕ್ಕೆ ಹೋಗಿದ್ದ ಕಾರವಾರ ನಗರಸಭೆ ಮಾಜಿ ಸದಸ್ಯನ ಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement