ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶಕುಮಾರ ನೇಮಕ

ನವದೆಹಲಿ: 1988ರ ಬ್ಯಾಚ್‌ ಐಎಎಸ್ ಅಧಿಕಾರಿ ಜ್ಞಾನೇಶಕುಮಾರ ಅವರನ್ನು ಮುಖ್ಯ ಚುನಾವಣಾ ಆಯುಕ್ತರಾಗಿ ಸೋಮವಾರ ನೇಮಕ ಮಾಡಲಾಗಿದೆ. ಅವರು ಚುನಾವಣಾ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪ್ರಧಾನಿ ಮಂತ್ರಿ ನರೇಂದ್ರ ಮೋದಿ, ಕಾನೂನು ಸಚಿವ ಅರ್ಜುನ ಮೇಘವಾಲ್ ಮತ್ತು ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖ್ಯ ಚುನಾವಣೆ ಆಯುಕ್ತರನ್ನು ಆಯ್ಕೆ ಮಾಡುವ ಸಭೆ ನಡೆದ ಕೆಲವೇ ಗಂಟೆಗಳ ನಂತರ ಕೇಂದ್ರ ಕಾನೂನು ಸಚಿವರ ಪ್ರಕಟಣೆ ಹೊರಬಿದ್ದಿದೆ. ಇವರು ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತರಾಗಿದ್ದಾರೆ. ಅವರ ಅಧಿಕಾರಾವಧಿಯು 2029 ರ ಜನವರಿ 26 ರವರೆಗೆ ಇರುತ್ತದೆ.
ಜ್ಞಾನೇಶಕುಮಾರ ಅವರು ಈ ವರ್ಷದ ಕೊನೆಯಲ್ಲಿ ಬಿಹಾರ ವಿಧಾನಸಭೆ ಚುನಾವಣೆ ಮತ್ತು 2026 ರಲ್ಲಿ ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ.
ಜ್ಞಾನೇಶಕುಮಾರ ಅವರು ಜನವರಿ 31, 2024 ರಂದು ಸಹಕಾರ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದಾರೆ. ಅದಕ್ಕೂ ಮೊದಲು ಅವರು ಸಂಸದೀಯ ವ್ಯವಹಾರಗಳ ಸಚಿವಾಲಯದಲ್ಲಿಯೂ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಮುಖ ಸುದ್ದಿ :-   ನಲ್ಲಿ ನೀರು ವಿವಾದ: ಕೇಂದ್ರ ಸಚಿವರ ಇಬ್ಬರು ಸೋದರಳಿಯಂದಿರ ನಡುವೆ ಗುಂಡಿನ ಚಕಮಕಿ, ಓರ್ವ ಸಾವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement