ಸಿಎಂ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಬಿ.ಆರ್.ಪಾಟೀಲಗೆ ಈಗ ಮತ್ತೊಂದು ಹುದ್ದೆ, ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು : ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಆಪ್ತ ಹಾಗೂ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ (B.R.Patil)​ ಅವರಿಗೆ ಈಗ ಮತ್ತೊಂದು ಹುದ್ದೆ ನೀಡಲಾಗಿದೆ.
ಈಗ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಬಿ.ಆರ್.ಪಾಟೀಲ್ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಈ ಬಗ್ಗೆ ಸೋಮವಾರ (ಫೆ. 17) ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರ್ದ ಅಧೀನ ಕಾರ್ಯದರ್ಶಿ ಮಲ್ಲಿನಾಥ ಅಧಿಸೂಚನೆ ಹೊರಡಿಸಿದ್ದಾರೆ.

ಆದೇಶದಲ್ಲಿ ಬಿ.ಆರ್.ಪಾಟೀಲ್ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಮತ್ತು ಇತರ ಎಲ್ಲ ಇತರ ಸೌಲಭ್ಯ ನೀಡುವಂತೆ ಸೂಚಿಸಲಾಗಿದೆ.
ಈ ಹಿಂದೆ ಬಿ.ಆರ್.ಪಾಟೀಲ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಅವರು ಇತ್ತೀಚೆಗಷ್ಟೇ ಆ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ಸಲ್ಲಿಸಿದ್ದರು. ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ, ಅಧಿಕಾರಿಗಳು ಸರಿಯಾಗಿ ಮಾತು ಕೇಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಅವರು ರಾಜೀನಾಮೆ ನೀಡಿದ್ದು ಅಚ್ಚರಿಗೆ ಕಾರಣವಾಗಿತ್ತು.

ಪ್ರಮುಖ ಸುದ್ದಿ :-   ಬೆಳಗಾವಿ ಮಹಾನಗರ ಪಾಲಿಕೆ : ಮಂಗೇಶ ನೂತನ ಮೇಯರ್‌, ವಾಣಿ ಜೋಶಿ ಉಪಮೇಯರ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement