ಮೈಸೂರು: ಇಲ್ಲಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ನಲ್ಲಿ ಒಂದೇ ಕುಟುಂಬದ ನಾಲ್ವರು ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ.
ಮೃತರನ್ನು ಚೇತನ (45), ಇವರ ಪತ್ನಿ ರೂಪಾಲಿ (43), ತಾಯಿ ಪ್ರಿಯಂವಧ (62) ಮತ್ತು ಮಗ ಕುಶಾಲ್ (15) ಎಂದು ಹೇಳಲಾಗಿದೆ.
ಚೇತನ್ ಎಂಬವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರು ಮನೆಯವರಿಗೆ ವಿಷ ನೀಡಿ ಸಾಯಿಸಿ ನಂತರ ತಾನು ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಚೇತನ್ ಮೂಲತಃ ಹಾಸನ ಜಿಲ್ಲೆಯವರು. ಬೇರೆ ರಾಷ್ಟ್ರದಲ್ಲಿ ಕೆಲಸ ಮಾಡಲು ಇವರು ಕೆಲಸಗಾರರನ್ನು ನೇಮಕ ಮಾಡಿ ಕಳುಹಿಸುತ್ತಿದ್ದರು ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾನ್ಹವಿ ಮತ್ತು ವಿದ್ಯಾರಣ್ಯಪುರಂ ಇನ್ಸ್‌ಪೆಕ್ಟರ್ ಮೋಹಿತ್ ಸೇರಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ