ನವದೆಹಲಿ : ಬಿಜೆಪಿ ನಾಯಕರಾದ ಪರ್ವೇಶ ವರ್ಮಾ, ಕಪಿಲ್ ಮಿಶ್ರಾ, ಮಂಜಿಂದರ್ ಸಿಂಗ್ ಸಿರ್ಸಾ ಮತ್ತು ಆಶಿಶ್ ಸೂದ್ ಸೇರಿದಂತೆ ಆರು ಮಂದಿ ಗುರುವಾರ ರೇಖಾ ಗುಪ್ತಾ ನೇತೃತ್ವದ ದೆಹಲಿಯ ಬಿಜೆಪಿ ಸರ್ಕಾರದಲ್ಲಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬುಧವಾರ ಸಂಜೆ ಇಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ದೆಹಲಿ ಅಸೆಂಬ್ಲಿಯಲ್ಲಿ ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ.
ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಮತ್ತು ಅವರ ಆರು ಜನ ಕ್ಯಾಬಿನೆಟ್ ಸಚಿವರು ಮಧ್ಯಾಹ್ನ 12 ಗಂಟೆಗೆ ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ಮತ್ತು ಅತಿಶಿ ನಂತರ ರೇಖಾ ಗುಪ್ತಾ ದೆಹಲಿಯಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ 4 ನೇ ಮಹಿಳೆಯಾಗಲಿದ್ದಾರೆ.
ದೆಹಲಿ ಕ್ಯಾಬಿನೆಟ್ ಮಂತ್ರಿಗಳು
ರೇಖಾ ಗುಪ್ತಾ (ಮುಖ್ಯಮಂತ್ರಿ)
ಪರ್ವೇಶ ವರ್ಮಾ
ಆಶಿಶ್ ಸೂದ್
ಮಂಜಿಂದರ್ ಸಿಂಗ್ ಸಿರ್ಸಾ
ಪಂಕಜ ಸಿಂಗ್
ಕಪಿಲ್ ಮಿಶ್ರಾ
ರವೀಂದ್ರ ಕುಮಾರ (ಇಂದ್ರರಾಜ)
ಗುರುವಾರ ಮಧ್ಯಾಹ್ನ 12 ಗಂಟೆಗೆ ರಾಮಲೀಲಾ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ರೇಖಾ ಗುಪ್ತಾ ನೇತೃತ್ವದ ಹೊಸ ಬಿಜೆಪಿ ಸರ್ಕಾರ ಮತ್ತು ಅವರ ಮಂತ್ರಿ ಪರಿಷತ್ತು ಪ್ರಮಾಣ ವಚನ ಸ್ವೀಕರಿಸಲಿದೆ. ಅವರು ಮದನಲಾಲ ಖುರಾನಾ, ಸಾಹಿಬ್ ಸಿಂಗ್ ವರ್ಮಾ ಮತ್ತು ಸುಷ್ಮಾ ಸ್ವರಾಜ್ ನಂತರ ದೆಹಲಿಯಲ್ಲಿ ಬಿಜೆಪಿಯ ನಾಲ್ಕನೇ ಮುಖ್ಯಮಂತ್ರಿಯಾಗುತ್ತಾರೆ ಮತ್ತು ಪ್ರಸ್ತುತ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ನಗರದ ಮಧ್ಯ, ಉತ್ತರ ಮತ್ತು ನವದೆಹಲಿ ಪ್ರದೇಶಗಳಲ್ಲಿ 25,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಭಾಗವಹಿಸಲಿದ್ದಾರೆ.
ಇತ್ತೀಚಿನ ದೆಹಲಿ ಚುನಾವಣೆಯಲ್ಲಿ 70 ಸದಸ್ಯ ಬಲದ ಸದನದಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ನಿರ್ಣಾಯಕ ಜನಾದೇಶವನ್ನು ಪಡೆದುಕೊಂಡಿತು, ಆಮ್ ಆದ್ಮಿ ಪಕ್ಷದ 22 ಸ್ಥಾನಗಳನ್ನು ಪಡೆಯಲಷ್ಟೇ ಶಕ್ಯವಾಯಿತು. ಆ ಮೂಲಕ 10 ವರ್ಷಗಳ ೆಎಪಿ ಆಡಳಿತ ಕೊನೆಗೊಂಡಿತು. ಕಾಂಗ್ರೆಸ್ ಸತತವಾಗಿ ಮೂರನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ