ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪ ಹೊತ್ತಿರುವ ಮೌಲ್ವಿಯನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಘಟನೆ ನಡೆದು 11 ದಿನಗಳ ಬಳಿಕ ಪೊಲೀಸರು ಆರೋಪಿ ಮುಫ್ತಿ ಮುಸ್ತಾಕ್ ಅವರನ್ನು ಬಂಧಿಸಿದ್ದಾರೆ. ಘಟನೆ ಬಳಿಕ ಮೌಲ್ವಿಯ ಭಾಷಣದ ವೀಡಿಯೊವೊಂದು ವೈರಲ್ ಆಗಿತ್ತು.
ಗಲಭೆಗೆ ಈ ಪ್ರಚೋದನಾಕಾರಿ ಭಾಷಣವೇ ಕಾರಣ ಎಂದು ಆರೋಪಿಸಲಾಗಿತ್ತು. ಸೋಷಿಯಲ್ ಮಿಡೀಯಾದಲ್ಲಿ ವ್ಯಕ್ತಿಯೊಬ್ಬ ಮಾಡಿದ್ದ ಪೋಸ್ಟ್ ಗಲಭೆಗೆ ಕಾರಣವಾಗಿತ್ತು.
ಬಳಿಕ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆತನನ್ನು ವಶಕ್ಕೆ ನೀಡುವಂತೆ ಇನ್ನೂರು ಜನ ಠಾಣೆ ಬಳಿ ಬಂದು ಗಲಾಟೆ ಮಾಡಿ, ಕಲ್ಲು ತೂರಿದ್ದರು. ಆಗ ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು. ಈ ನಡುವೆ ಗಲಭೆಗೆ ಕಾರಣವೆಂದು ಹೇಳಲಾಗುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ