ದೊಡ್ಡಬಳ್ಳಾಪುರ | ರೀಲ್ಸ್‌ ಹುಚ್ಚಿಗೆ ಬಿದ್ದು ಪ್ರಾಣ ಕಳೆದುಕೊಂಡ ಮೂವರು ಯುವಕರು..!

ದೊಡ್ಡಬಳ್ಳಾಪುರ: ರೀಲ್ಸ್‌ (Reels) ಹುಚ್ಚಿಗೆ ಬಿದ್ದು ಮೂವರು ಯುವಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ರೀಲ್ಸ್​ ಮಾಡುವಾಗ ರೈಲು ಡಿಕ್ಕಿ ಹೊಡೆದು ಉತ್ತರ ಪ್ರದೇಶ ಮೂಲದ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.
ಮೃತರನ್ನು ರಾಹುಲ್ (18), ಬಿಕೇಶ (20) ಮತ್ತು ಲಲ್ಲನ್ (24) ಎಂದು ಗುರುತಿಸಲಾಗಿದೆ. ಯಶವಂತಪುರ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಯುವಕರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ಬಂದು ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ಯುವಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ರೈಲು ಡಿಕ್ಕಿ ಹೊಡೆದ ರಭಸಕ್ಕೆ ಹಳಿಗಳ ಮೇಲೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹಳಿ ಮೇಲಿದ್ದ ಮೃತದೇಹಗಳನ್ನ ಕಂಡು ಸ್ಥಳಿಯರಿಂದ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement