ಮುಡಾ ಹಗರಣ : ಲೋಕಾಯುಕ್ತದಿಂದ ನ್ಯಾಯಾಲಯಕ್ಕೆ 11000 ಪುಟಗಳ ವರದಿ ಸಲ್ಲಿಕೆ

ಬೆಂಗಳೂರು: ಮುಡಾ ಹಗರಣಕ್ಕೆ (MUDA scam) ಸಂಬಂಧಿಸಿದಂತೆ ಇಂದು, ಗುರುವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ (Lokayukta) ಪೊಲೀಸ್ ಟಿ.ಉದೇಶ ಅವರು ಒಟ್ಟು 11 ಸಾವಿರ ಪುಟಗಳ ತನಿಖೆಯ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ.

ಈ ವರದಿಯಲ್ಲಿ,  ಸಿದ್ಧಾರಮಯ್ಯ ಹಾಗೂ ಇತರ ಮೂವರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಲೋಕಾಯುಕ್ತ ಪೊಲೀಸರು ಅವರಿಗೆ ಕ್ಲೀನ್‌ಚಿಟ್‌ನೀಡಿದ್ದಾರೆ.

ಜನಪ್ರತಿನಿಧಿಗಳ ಕೋರ್ಟ್‌ನ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಅಂತಿಮ ವರದಿ ಸಲ್ಲಿಸಲಾಯಿತು.   ತನಿಖಾ ವರದಿಯಲ್ಲಿ ಲೋಕಾಯುಕ್ತ ಪೊಲೀಸರು ಈ ಹಗರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾವಮೈದುನ ಮಲ್ಲಿಕಾರ್ಜುನ ಹಾಗೂ ದೇವರಾಜು ಎಂಬವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಮಾಡಿದ ಆರೋಪಗಳು ಸುಳ್ಳು. ಸೈಟ್ ಹಂಚಿಕೆಯಲ್ಲಿ ಸಿದ್ದರಾಮಯ್ಯ ಮುಡಾ ಮೇಲೆ ಪ್ರಭಾವ ಬೀರಿದ್ದರ ಬಗ್ಗೆ ಸಾಕ್ಷ್ಯ ಇಲ್ಲ. ಪೊಲೀಸರು 50ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.   ಹೀಗಾಗಿ ಪ್ರಕರಣದಲ್ಲಿ ಬೇರೆ ಯಾರದ್ದೂ ಪ್ರಭಾವ ಕಂಡುಬಂದಿಲ್ಲ ಎಂದು ತನಿಖಾ ವರದಿಯಲ್ಲಿ ಲೋಕಾಯುಕ್ತ ಪೊಲೀಸರು ಉಲ್ಲೇಖಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement