ಶಿವಮೊಗ್ಗ : ಜಿಲ್ಲೆಯ ಸಕ್ರೆಬೈಲ್ ಆನೆ ಬಿಡಾರದ ಸಮೀಪ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ.
ಇದರಲ್ಲಿ ಎರಡು ಶವಗಳು ಪರುಷರಾಗಿದ್ದು, ಮತ್ತೊಂದು ಶವ ಮಹಿಳೆಯದ್ದು ಎಂದು ತಿಳಿದುಬಂದಿದೆ. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ತುಂಗಾನಗರ ಪೊಲೀಸ್ ಠಾಣೆಯ ಪೊಲೀಸರು ತೆರಳಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಆನೆ ಬಿಡಾರದ ಬಳಿ 10 ನೇ ಮೈಲಿಕಲ್ಲಿನ ಸಮೀಪದ ಅರಣ್ಯ ಪ್ರದೇಶದಿಂದ ಒಳಕ್ಕೆ ತೆರಳಿದಾಗ ಸಿಗುವ ತುಂಗಾ ಬ್ಯಾಕ್ ವಾಟರ್ ದಡದಲ್ಲಿ ಮೂವರು ಮೃತದೇಹ ಪತ್ತೆಯಾಗಿದೆ. ಮೃತದೇಹಗಳು ಕೊಳೆತು ಹೋಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರು ಯಾರು, ಇಲ್ಲಿಗೆ ಯಾಕೆ ಬಂದಿದ್ದರು ಎಂಬುದು ಗೊತ್ತಾಗಿಲ್ಲ. ಈ ಬಗ್ಗೆ ತನಿಖೆಯ ನಂತರ ಸ್ಪಷ್ಟ ಮಾಹಿತಿ ಸಿಗಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ