ಬೆಳಗಾವಿ: ಮರಾಠಿ ಮಾತನಾಡದ ನಿರ್ವಾಹಕನ ಮೇಲೆ ಪುಂಡರು ಹಲ್ಲೆ ನಡೆಸಿದ ಪ್ರಕರಣದಲ್ಲಿ ಹಲ್ಲೆಗೊಳಗಾದ ನಿರ್ವಾಹಕನ ವಿರುದ್ಧವೇ ಪೋಕ್ಸೋ (POCSO) ಪ್ರಕರಣ ದಾಖಲಿಸಲಾಗಿದೆ.
ಬೆಳಗಾವಿಯ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ನನಗೆ ಮರಾಠಿ ಅರ್ಥವಾಗಲ್ಲ, ಕನ್ನಡದಲ್ಲಿ ಮಾತನಾಡು ಎಂದು ಹೇಳಿದ್ದಕ್ಕೆ ನಿರ್ವಾಹಕನ ಮೇಲೆ ಶುಕ್ರವಾರ ಹಲ್ಲೆ ನಡೆಸಲಾಗಿತ್ತು, ನಿರ್ವಾಹಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದರು. ಈಗ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಮೇಲೆ ಪೋಕ್ಸೋ ಪ್ರಕರಣ (POCSO Case) ದಾಖಲಿಸಲಾಗಿದೆ.
ಬಸ್‌ನಲ್ಲಿ ಕೆಟ್ಟ ದೃಷ್ಟಿಯಿಂದ ನೋಡಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕನ್ನಡ ಮಾತನಾಡಿ ಎಂದಿದ್ದಕ್ಕೆ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಮಹಾದೇವ ಆರೋಪಿಸಿದ್ದರು. ಆ ದೂರನ್ನಾಧರಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ. ಈ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗುತ್ತಿದ್ದಂತೆ ಶನಿವಾರ ನಸುಕಿನ ಜಾವ 2:30ರ ವೇಳೆಗೆ ಬಾಲಕಿಯಿಂದ ದೂರು ದಾಖಲಾಗಿದೆ. ಇದಕ್ಕೆ ಪ್ರತಿಯಾಗಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ