ಬೆಳಗಾವಿ : ಮರಾಠಿ ಮಾತನಾಡಲು ಬರಲ್ಲ ಎಂದು ಹೇಳಿದ್ದಕ್ಕೆ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಬಸ್ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಮಾರಿಹಾಳ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದ್ದು, ಈಗ ಬಾಳೇಕುಂದ್ರಿಯ ಮೋಹನ ಹಂಚಿನಾಳ ಎಂಬವರನ್ನು ಬಂಧಿಸಿದ ನಂತರ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಭಾನುವಾರವೂ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಪರದಾಡಬೇಕಾಯಿತು. ಬೆಳಗಾವಿಯಿಂದ ಕೊಲ್ಲಾಪುರ, ಪುಣೆ, ಸಾತಾರಾ, ಮುಂಬೈ ಮತ್ತಿತರ ಕಡೆ ತೆರಳುವವರು ಬಸ್ ಸಿಗದೆ ಹೈರಾಣಾದರು. ಎರಡೂ ರಾಜ್ಯಗಳ ಸಾರಿಗೆ ಸಂಸ್ಥೆಗಳ ಬಸ್ಗಳು ತಮ್ಮ ಗಡಿಯವರೆಗೆ ಬಸ್ ಕಾರ್ಯಾಚರಣೆ ನಡೆಸಿದವು.
ನಿಮ್ಮ ಕಾಮೆಂಟ್ ಬರೆಯಿರಿ