ಬೆಳಗಾವಿ | ಮರಾಠಿ ಮಾತನಾಡಲು ಬರಲ್ಲ ಎಂದಿದ್ದಕ್ಕೆ ನಿರ್ವಾಹಕನ ಮೇಲೆ ಹಲ್ಲೆ : ಮತ್ತೊಬ್ಬ ಆರೋಪಿ ಬಂಧನ

ಬೆಳಗಾವಿ : ಮರಾಠಿ ಮಾತನಾಡಲು ಬರಲ್ಲ ಎಂದು ಹೇಳಿದ್ದಕ್ಕೆ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ಬಸ್‌ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಮಾರಿಹಾಳ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಈಗಾಗಲೇ ಬಂಧಿಸಲಾಗಿದ್ದು, ಈಗ ಬಾಳೇಕುಂದ್ರಿಯ ಮೋಹನ ಹಂಚಿನಾಳ ಎಂಬವರನ್ನು ಬಂಧಿಸಿದ ನಂತರ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಭಾನುವಾರವೂ ಬಸ್‌ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಪರದಾಡಬೇಕಾಯಿತು. ಬೆಳಗಾವಿಯಿಂದ ಕೊಲ್ಲಾಪುರ, ಪುಣೆ, ಸಾತಾರಾ, ಮುಂಬೈ ಮತ್ತಿತರ ಕಡೆ ತೆರಳುವವರು ಬಸ್ ಸಿಗದೆ ಹೈರಾಣಾದರು. ಎರಡೂ ರಾಜ್ಯಗಳ ಸಾರಿಗೆ ಸಂಸ್ಥೆಗಳ ಬಸ್‌ಗಳು ತಮ್ಮ ಗಡಿಯವರೆಗೆ ಬಸ್‌ ಕಾರ್ಯಾಚರಣೆ ನಡೆಸಿದವು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement