ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಮುಂದಿನ ಒಂದೆರಡು ದಿನಗಳ ಕಾಲ  ಅಲ್ಲಲ್ಲಿ ಮಳೆಯಾಗುವ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗಬಹುದು ಎಂದು ಹೇಳಿದೆ.
ಆದರೆ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ರಾಜ್ಯದ ಮೈಸೂರಿನಲ್ಲಿ 15.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದ್ದರೆ ಕಲಬುರಗಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಗದಗ, ಬೆಂಗಳೂರು, ಮಂಡ್ಯ, ಹಾಸನ ಮತ್ತು ಮೈಸೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿದೆ.
ಕರಾವಳಿಯಲ್ಲಿ 33-35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶವಿದ್ದರೆ, ಬೀದರ್, ವಿಜಯಪುರ, ಧಾರವಾಡ, ಕೊಪ್ಪಳ, ರಾಯಚೂರು, ಹಾವೇರಿಯಲ್ಲಿ 33-35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕಲಬುರಗಿ, ಬಾಗಲಕೋಟೆ ಮತ್ತು ಗದಗದಲ್ಲಿ 36-38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರಿನಲ್ಲಿ ಆಗಾಗ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೇಸಿಗೆಗೂ ಮುನ್ನವೇ ಅಂದರೆ ಈಗಿನಿಂದಲೇ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ

ಪ್ರಮುಖ ಸುದ್ದಿ :-   ಗೃಹಲಕ್ಷ್ಮಿ ಯೋಜನೆ’ಗೆ ಸೌಲಭ್ಯ ಪಡೆಯಲು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement