ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಬೆಂಗಳೂರು: ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ ಕಾಂಗ್ರೆಸ್​ ಮುಖಂಡನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜೊತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿಕೊಲೆ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿ ಅಶೋಕ ನಗರ ಠಾಣೆ ಪೊಲೀಸರು ಗಾಯದ ಮಡುವಲ್ಲಿ ಬಿದ್ದ ಹೈದರ್ ಅಲಿಯನ್ನು ಕೂಡಲೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಷ್ಟರಲ್ಲಾಗಲೇ ಹೈದರ್ ಅಲಿ ಮೃತಪಟ್ಟಿದ್ದರು.

ಘಟನೆಯಲ್ಲಿ ಜೊತೆಯಲ್ಲಿದ್ದ ಸ್ನೇಹಿತನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿದ ನಂತರ ಹೈದರ್​ ಅಲಿಯ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿದರು. ಲಾಂಗು, ಮಚ್ಚು ಹಿಡಿದು ಬೌರಿಂಗ್ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದರು. ಸದ್ಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜೊತೆ ಗುರುತಿಸಿಕೊಂಡಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ತುಮಕೂರು : ಲಾಡ್ಜ್‌ನಲ್ಲಿ ದಾವಣಗೆರೆ ಪಿಎಸ್ಐ ಆತ್ಮಹತ್ಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement